ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಕಾರಾತ್ಮಕ ವಹಿವಾಟು: ಮೂರನೇ ದಿನವೂ ಸೂಚ್ಯಂಕ ಏರಿಕೆ

Last Updated 27 ಆಗಸ್ಟ್ 2019, 20:00 IST
ಅಕ್ಷರ ಗಾತ್ರ

ಮುಂಬೈ: ಆರ್ಥಿಕ ಉತ್ತೇಜನಾ ಕೊಡುಗೆಗಳ ಪರಿಣಾಮ ಮತ್ತು ಹೆಚ್ಚುವರಿ ನಿಧಿ ವರ್ಗಾವಣೆಗೆ ಆರ್‌ಬಿಐ ಸಮ್ಮತಿಸಿರುವುದರಿಂದ ಮಂಗಳವಾರ ಷೇರುಪೇಟೆಗಳಲ್ಲಿ ಸಕಾರಾತ್ಮಕ ವಹಿವಾಟು ನಡೆಯಿತು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) 147 ಅಂಶ ಏರಿಕೆಯಾಗಿ 37,641 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 48 ಅಂಶ ಹೆಚ್ಚಾಗಿ 11,105 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ಸಂಪತ್ತು ವೃದ್ಧಿ: ಮಾರುಕಟ್ಟೆ ಮೌಲ್ಯದ ಲೆಕ್ಕದಲ್ಲಿ ಹೂಡಿಕೆದಾರರ ಸಂಪತ್ತು ₹ 1.12 ಲಕ್ಷ ಕೋಟಿ ಹೆಚ್ಚಾಗಿದೆ.

ಷೇರುಪೇಟೆಯ ಬಂಡವಾಳ ಮೌಲ್ಯ ₹ 140.34 ಲಕ್ಷ ಕೊಟಿಯಿಂದ ₹ 141.46 ಲಕ್ಷ ಕೋಟಿಗೆ ಏರಿಕೆಯಾಗಿದೆ. ಮೂರು ದಿನಗಳ ವಹಿವಾಟಿನಲ್ಲಿ ಹೂಡಿಕೆದಾರರ ಸಂಪತ್ತು ₹ 3.54 ಲಕ್ಷ ಕೋಟಿ ಹೆಚ್ಚಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT