ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿದ್ದು ಎದ್ದ ಷೇರುಪೇಟೆ ಸೂಚ್ಯಂಕ

Last Updated 21 ಜೂನ್ 2021, 15:52 IST
ಅಕ್ಷರ ಗಾತ್ರ

ಮುಂಬೈ: ದಿನದ ಆರಂಭದಲ್ಲಿ ದೊಡ್ಡ ಪ್ರಮಾಣ ಕುಸಿತ ಕಂಡಿದ್ದ ಬಿಎಸ್‌ಇ ಸೆನ್ಸೆಕ್ಸ್, ಕೊನೆಯಲ್ಲಿ ಚೇತರಿಕೆ ಕಂಡಿತು. ಎಚ್‌ಡಿಎಫ್‌ಸಿ, ಎಸ್‌ಬಿಐ ಮತ್ತು ರಿಲಯನ್ಸ್ ಇಂಡಸ್ಟ್ರೀಸ್‌ ಷೇರುಗಳು ಉತ್ತಮ ಗಳಿಕೆ ಕಂಡುಕೊಂಡವು.

ವಹಿವಾಟಿನ ಆರಂಭದಲ್ಲಿ 600 ಅಂಶ ಕುಸಿದಿದ್ದ ಸೆನ್ಸೆಕ್ಸ್, ಕೊನೆಯಲ್ಲಿ 230 ಅಂಶ ಏರಿಕೆಯೊಂದಿಗೆ ವಹಿವಾಟು ಪೂರ್ಣಗೊಳಿಸಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 63 ಅಂಶ ಏರಿಕೆ ದಾಖಲಿಸಿತು.

‘ದೇಶದ ಎಲ್ಲರಿಗೂ ಉಚಿತವಾಗಿ ಕೋವಿಡ್ ಲಸಿಕೆ ಒದಗಿಸುವ ಪ್ರಧಾನಿಯವರ ಘೋಷಣೆಯ ಪ್ರಕಾರ ಲಸಿಕೆ ನೀಡುವ ಅಭಿಯಾನ ಆರಂಭವಾಗಿದೆ. ಇದು ಆರ್ಥಿಕ ಬೆಳವಣಿಗೆಗೆ ವೇಗ ನೀಡುವ ನಿರೀಕ್ಷೆ ಹುಟ್ಟಿಸಿದೆ. ಮಾರುಕಟ್ಟೆ ಜಿಗಿದಿದ್ದಕ್ಕೆ ಇದು ಕೂಡ ಒಂದು ಕಾರಣ. ಖಾಸಗಿಯವರಿಗೆ ಮಾರಾಟ ಮಾಡಲು ಕೇಂದ್ರ ಸರ್ಕಾರವು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಇಂಡಿಯನ್ ಓವರ್ಸೀಸ್ ಬ್ಯಾಂಕ್‌ ಹೆಸರನ್ನು ಅಂತಿಮಗೊಳಿಸಿದೆ ಎಂಬ ವರದಿಗಳ ಕಾರಣದಿಂದಾಗಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಷೇರುಮೌಲ್ಯ ಏರಿಕೆ ಕಂಡಿತು’ ಎಂದು ಜಿಯೋಜಿತ್ ಫೈನಾನ್ಶಿಯಲ್ ಸರ್ವಿಸಸ್‌ನ ಸಂಶೋಧನಾ ವಿಭಾಗದ ಮುಖ್ಯಸ್ಥ ವಿನೋದ್ ನಾಯರ್ ತಿಳಿಸಿದರು.

ಮಿಡ್‌ ಕ್ಯಾಪ್‌ ಹಾಗೂ ಸ್ಮಾಲ್‌ ಲ್ಯಾಪ್‌ ವರ್ಗದಲ್ಲಿನ ಒಳ್ಳೆಯ ಕಂಪನಿಗಳ ಷೇರುಗಳನ್ನು ಹೂಡಿಕೆದಾರರು ಖರೀದಿಸುತ್ತಿದ್ದಾರೆ ಎಂದು ರಿಲಯನ್ಸ್ ಸೆಕ್ಯುರಿಟೀಸ್‌ನ ವಿನೋದ್ ಮೋದಿ ಹೇಳಿದರು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆಯು ಪ್ರತಿ ಬ್ಯಾರೆಲ್‌ಗೆ 73.64 ಡಾಲರ್‌ಗೆ ಏರಿಕೆ ಆಗಿದೆ. ಅಮೆರಿಕದ ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯವು 24 ಪೈಸೆ ಇಳಿಕೆ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT