ಗುರುವಾರ , ಮೇ 28, 2020
27 °C

ಕೊರೊನಾ ಪ್ರಕರಣಗಳ ಹೆಚ್ಚಳ: ನಕಾರಾತ್ಮಕ ವಹಿವಾಟಿನ ವಾರ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ದೇಶದ ಷೇರುಪೇಟೆಗಳ ವಾರದ ವಹಿವಾಟು ನಕಾರಾತ್ಮಕವಾಗಿ ಅಂತ್ಯವಾಗಿದೆ.

ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕ 261 ಅಂಶ ಇಳಿಕೆಯಾಗಿ 31,327 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ. ಮಾರುಕಟ್ಟೆ ಮೌಲ್ಯದ ಲೆಕ್ಕದಲ್ಲಿ ಹೂಡಿಕೆದಾರರ ಸಂಪತ್ತು ₹ 1.77 ಲಕ್ಷ ಕೋಟಿ ಕರಗಿದ್ದು, ಷೇರುಪೇಟೆಯ ಬಂಡವಾಳ ಮೌಲ್ಯ 121.73 ಲಕ್ಷ ಕೋಟಿಗಳಿಗೆ ಇಳಿಕೆಯಾಗಿದೆ.

ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸೂಚ್ಯಂಕ ನಿಫ್ಟಿ 112 ಅಂಶ ಹೆಚ್ಚಾಗಿ 9,154 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

ಕೋವಿಡ್‌ ಒತ್ತಡ: ಭಾರತವನ್ನೂ ಒಳಗೊಂಡು ಜಾಗತಿಕ ಷೇರುಪೇಟೆಗಳ ಮೇಲೆ ಕೋವಿಡ್‌–19 ಸೃಷ್ಟಿಸುತ್ತಿರುವ ಒತ್ತಡವು ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಹೂಡಿಕೆದಾರರು ಮಾರಾಟಕ್ಕೆ ಹೆಚ್ಚು ಗಮನ ನೀಡುತ್ತಿದ್ದಾರೆ.

ರೂಪಾಯಿ: ಕರೆನ್ಸಿ ವಿನಿಮಾಯ ಮಾರುಕಟ್ಟೆಯಲ್ಲಿ ಡಾಲರ್‌ ಎದುರು ರೂಪಾಯಿ ಮೌಲ್ಯ ವಾರದ ವಹಿವಾಟಿನಲ್ಲಿ 7 ಪೈಸೆ ಕಡಿಮೆಯಾಗಿ ಶುಕ್ರವಾರದ ವಹಿವಾಟಿನ ಅಂತ್ಯಕ್ಕೆ ಒಂದು ಡಾಲರ್‌ಗೆ ₹ 76.46ಕ್ಕೆ ತಲುಪಿತ್ತು.

ಕಚ್ಚಾ ತೈಲ: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್‌ ತೈಲ ದರ ಪ್ರತಿ ಬ್ಯಾರೆಲ್‌ಗೆ 6.26 ಡಾಲರ್‌ಗಳಷ್ಟು ಕಡಿಮೆಯಾಗಿದ್ದು, ಶುಕ್ರವಾರದ ಅಂತ್ಯಕ್ಕೆ ಒಂದು ಬ್ಯಾರಲ್‌ಗೆ 22.16  ಡಾಲರ್‌ಗಳಿಗೆ ತಲುಪಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು