ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡನೇ ದಿನವೂ ಮುಂದುವರಿದ ಗೂಳಿ ಓಟ

ಜಾಗತಿಕ ಮಾರುಕಟ್ಟೆಯಲ್ಲಿ ನಡೆದ ಸಕಾರಾತ್ಮಕ ವಹಿವಾಟಿನ ಪ್ರಭಾವ
Last Updated 9 ಫೆಬ್ರುವರಿ 2022, 16:11 IST
ಅಕ್ಷರ ಗಾತ್ರ

ಮುಂಬೈ: ಜಾಗತಿಕ ಷೇರುಪೇಟೆಗಳ ವಹಿವಾಟು ಚೇತರಿಕೆ ಕಂಡಿದ್ದರಿಂದ ದೇಶದ ಷೇರುಪೇಟೆಗಳು ಸತತ ಎರಡನೇ ದಿನವೂ ಗಳಿಕೆ ಕಂಡವು.

ಆದರೆ, ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಬುಧವಾರ ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯ ಇಳಿಕೆ ಮತ್ತು ವಿದೇಶಿ ಹೂಡಿಕೆದಾರರು ಮಾರಾಟಕ್ಕೆ ಗಮನ ನೀಡಿದ್ದರಿಂದ ಸೂಚ್ಯಂಕಗಳು ಹೆಚ್ಚಿನ ಗಳಿಕೆ ಕಂಡುಕೊಳ್ಳಲಿಲ್ಲ ಎಂದು ವರ್ತಕರು ಹೇಳಿದ್ದಾರೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ 657 ಅಂಶ ಹೆಚ್ಚಾಗಿ 58,465 ಅಂಶಗಳಿಗೆ ತಲುಪಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಪ್ಟಿ 197 ಅಂಶ ಹೆಚ್ಚಾಗಿ 17,463 ಅಂಂಶಗಳಿಗೆ ತಲುಪಿತು.

ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳನ್ನು ಹೊರತುಪಡಿಸಿ ಉಳಿದ ಎಲ್ಲ ವಲಯಗಳ ಷೇರುಗಳು ಗಳಿಕೆ ಕಂಡುಕೊಂಡಿವೆ. ಆರ್‌ಬಿಐನ ಹಣಕಾಸು ನೀತಿಯು ಗುರುವಾರ ಹೊರಬೀಳಲಿದ್ದು ಷೇರುಪೇಟೆಗೆ ಮಹತ್ವದ್ದಾಗಿದೆ. ದೇಶದಲ್ಲಿ ಹಣದುಬ್ಬರ ಹೆಚ್ಚಳ ಮತ್ತು ಜಾಗತಿಕ ಮಟ್ಟದಲ್ಲಿ ಕೇಂದ್ರೀಯ ಬ್ಯಾಂಕ್‌ಗಳು ಬಡ್ಡಿದರ ಏರಿಕೆ ಮಾಡಲು ಮುಂದಾಗಿರುವುದು ಆರ್‌ಬಿಐಗೂ ಸಹ ಬಡ್ಡಿದರದಲ್ಲಿ ಬದಲಾವಣೆ ಮಾಡುವ ಸಂದರ್ಭ ಸೃಷ್ಟಿಸಬಹುದು ಎಂದು ಜಿಯೋಜಿತ್‌ ಫೈನಾನ್ಶಿಯಲ್ ಸರ್ವಿಸಸ್‌ನ ಸಂಶೋಧನಾ ಮುಖ್ಯಸ್ಥ ವಿನೋದ್‌ ನಾಯರ್‌ ಹೇಳಿದ್ದಾರೆ.

ರೂಪಾಯಿ ಮೌಲ್ಯ ಇಳಿಕೆ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯ 10 ಪೈಸೆ ಇಳಿಕೆ ಕಂಡು ಒಂದು ಡಾಲರ್‌ಗೆ ₹ 74.84ರಂತೆ ವಿನಿಮಯಗೊಂಡಿತು.

ಮುಖ್ಯಾಂಶಗಳು

ಬಿಎಸ್‌ಇ ಮಿಡ್‌ ಮತ್ತು ಸ್ಮಾಲ್‌ ಕ್ಯಾಪ್‌ ಸೂಚ್ಯಂಕಗಳು ಶೇ 1.23ರಷ್ಟು ಏರಿಕೆ

ಸೆನ್ಸೆಕ್ಸ್‌ನಲ್ಲಿ ಮಾರುತಿ ಷೇರು ಮೌಲ್ಯ ಶೇಕಡ 4.14ರಷ್ಟು ಹೆಚ್ಚಳ

ಆರ್‌ಬಿಐ ನಿರ್ಧಾರದತ್ತ ಷೇರುಪೇಟೆ ಗಮನ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT