ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರರಾಷ್ಟ್ರೀಯ ಥಿಯೇಟರ್‌ ಒಲಿಂಪಿಕ್ಸ್‌ಗೆ ಚಾಲನೆ

ಮಾರ್ಚ್‌ 6ರ ವರೆಗೆ ರವೀಂದ್ರ ಕಲಾಕ್ಷೇತ್ರ, ಕಲಾಗ್ರಾಮದಲ್ಲಿ ರಂಗ ಪ್ರದರ್ಶನ
Last Updated 20 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರೀಯ ನಾಟಕ ಶಾಲೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದಲ್ಲಿ ಆಯೋಜಿಸಿರುವ 8ನೇ ಅಂತರರಾಷ್ಟ್ರೀಯ ಥಿಯೇಟರ್‌ ಒಲಿಂಪಿಕ್ಸ್‌ಗೆ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಚಂದ್ರಶೇಖರ ಕಂಬಾರ ಮಂಗಳವಾರ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ‘ಜಾತಿ, ಧರ್ಮ, ಭೇದಭಾವ ಮರೆತು ಲೋಕವನ್ನು ಮೀರಿದ ಅನುಭವವನ್ನು ಪ್ರವೇಶಿಸುವಂತೆ ಮಾಡುವುದು ನಾಟಕ ಒಂದೇ. ಜನ ಇಂತಹ ಸದವಕಾಶವನ್ನು ಬಳಸಿಕೊಂಡು ನಾಟಕೋತ್ಸವವನ್ನು ಯಶಸ್ವಿಗೊಳಿಸಬೇಕು’ ಎಂದರು.

ರಾಷ್ಟ್ರೀಯ ನಾಟಕ ಶಾಲೆಯ ಬೆಂಗಳೂರು ಕೇಂದ್ರದ ನಿರ್ದೇಶಕ ಸಿ. ಬಸವಲಿಂಗಯ್ಯ ಮಾತನಾಡಿ, ‘ಸ್ನೇಹ ಧ್ವಜ ಎಂಬ ಘೋಷವಾಕ್ಯದೊಂದಿಗೆ ಈ ಉತ್ಸವ ನಡೆಯುತ್ತಿದೆ. ಮಾರ್ಚ್‌ 6ರವರೆಗೆ ರವೀಂದ್ರ ಕಲಾಕ್ಷೇತ್ರ, ಮಲ್ಲತ್ತಹಳ್ಳಿಯ ಕಲಾಗ್ರಾಮದ ಸಮುಚ್ಚಯ ಭವನದಲ್ಲಿ 25 ನಾಟಕಗಳು ಪ್ರದರ್ಶನಗೊಳ್ಳಲಿವೆ. 60 ರಂಗ ತಜ್ಞರಿಂದ ಕಾರ್ಯಾಗಾರ ಆಯೋಜಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT