ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಫ್‌ಪಿಐ ಹೂಡಿಕೆ ಹೆಚ್ಚಳ

Last Updated 8 ಜೂನ್ 2020, 6:13 IST
ಅಕ್ಷರ ಗಾತ್ರ

ನವದಹೆಲಿ: ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ದೇಶದ ಷೇರುಪೇಟೆಗಳಲ್ಲಿ ಜೂನ್‌ ತಿಂಗಳ ಮೊದಲ ವಾರದಲ್ಲಿ ₹ 18,589 ಕೋಟಿ ಹೂಡಿಕೆ ಮಾಡಿದ್ದಾರೆ.

ಮೊದಲ ವಾರದಲ್ಲಿ ಹೂಡಿಕೆದಾರರು ₹ 20,814 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದರೆ ₹ 2,225 ಕೋಟಿ ಮೌಲ್ಯದ ಸಾಲಪತ್ರಗಳನ್ನು ಮಾರಾಟ ಮಾಡಿದ್ದಾರೆ. ಇದರಿಂದ ಒಟ್ಟಾರೆ ಹೂಡಿಕೆ ₹ 18,589 ಕೋಟಿ ಆಗಿದೆ.

ಲಾಕ್‌ಡೌನ್‌ ತೆರವುಗೊಳಿಸುತ್ತಿರುವುದರಿಂದ ಆರ್ಥಿಕ ಚಟುವಟಿಕೆಗಳು ಚೇತರಿಸಿಕೊಳ್ಳುತ್ತಿವೆ. ಇದರ ಜತೆಗೆ ರಿಲಯನ್ಸ್ ಇಂಡಸ್ಟ್ರೀಸ್‌ನ ಹಕ್ಕಿನ ಷೇರು ವಿತರಣೆ ಯಶಸ್ವಿಯಾಗಿರುವುದು ಸಹ ಸಕಾರಾತ್ಮಕ ಚಟುವಟಿಕೆಗೆ ಕಾರಣವಾಗಿದೆ.

ಇದಕ್ಕೂ ಮೊದಲು, ಮಾರ್ಚ್‌, ಏಪ್ರಿಲ್‌ ಮತ್ತು ಮೇ ತಿಂಗಳಿನಲ್ಲಿ ‘ಎಫ್‌ಪಿಐ’, ಮಾರಾಟಕ್ಕೆ ಹೆಚ್ಚು ಗಮನ ನೀಡಿದ್ದರು.

ಕೋವಿಡ್‌–19 ವಿರುದ್ಧದ ಹೋರಾಟಕ್ಕೆ ಕೇಂದ್ರ ಸರ್ಕಾರವು ₹ 20.97 ಲಕ್ಷ ಕೋಟಿ ಮೊತ್ತದ ಆರ್ಥಿಕ ಪ್ಯಾಕೇಜ್‌ ಘೋಷಿಸಿರುವುದರಿಂದ ಷೇರುಪೇಟೆ ವಹಿವಾಟು ಚೇತರಿಸಿಕೊಂಡಿದೆ ಎಂದು ಬಜಾಜ್‌ ಕ್ಯಾಪಿಟಲ್‌ ರಿಸರ್ಚ್‌ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT