ಶುಕ್ರವಾರ, ಮಾರ್ಚ್ 5, 2021
30 °C

ವಿದೇಶಿ ಬಂಡವಾಳ ಹೂಡಿಕೆದಾರಿಂದ ₹ 18,456 ಕೋಟಿ ಹೂಡಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ಜನವರಿ 1ರಿಂದ 22ರವರೆಗಿನ ಅವಧಿಯಲ್ಲಿ ಭಾರತದ ಹಣಕಾಸು ಮಾರುಕಟ್ಟೆಯಲ್ಲಿ ₹ 18,456 ಕೋಟಿ ಹೂಡಿಕೆ ಮಾಡಿದ್ದಾರೆ.

ವಿದೇಶಿ ಹೂಡಿಕೆದಾರರು ₹ 24,469 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದು, ₹ 6,013 ಕೋಟಿ ಮೌಲ್ಯದ ಸಾಲಪತ್ರಗಳನ್ನು ಮಾರಾಟ ಮಾಡಿದ್ದಾರೆ.

ಜಾಗತಿಕ ಮಾರುಕಟ್ಟೆಯಲ್ಲಿ ನಗದು ಲಭ್ಯತೆ ಹೆಚ್ಚು ಇರುವುದರಿಂದ ಭಾರತದಂತಹ ಪ್ರವರ್ಧಮಾನಕ್ಕೆ ಬರುತ್ತಿರುವ ಮಾರುಕಟ್ಟೆಗಳಲ್ಲಿ ಹೆಚ್ಚಿನ ಹೂಡಿಕೆ ಆಗುತ್ತಿದೆ ಎಂದು ಗ್ರೋವ್‌ ಕಂಪನಿಯ ಸಹ ಸ್ಥಾಪಕ ಹರ್ಷ್‌ ಜೈನ್‌ ಹೇಳಿದ್ದಾರೆ.

ಆರ್ಥಿಕತೆಯು ನಿರೀಕ್ಷೆಗಿಂತಲೂ ವೇಗವಾಗಿ ಚೇತರಿಕೆ ಕಾಣುತ್ತಿರುವುದಕ್ಕೆ ಸೂಚನೆಗಳು ದೊರೆತಿವೆ. ಇದರಿಂದಾಗಿ ಭಾರತವು ಹೂಡಿಕೆದಾರರ ಆಕರ್ಷಕ ತಾಣವಾಗಿ ಮುಂದುವರಿಯಲಿದೆ ಎಂದೂ ಹೇಳಿದ್ದಾರೆ.

ಇಂಡೋನೇಷ್ಯಾ, ದಕ್ಷಿಣ ಕೊರಿಯಾ, ತೈವಾನ್‌ ಮತ್ತು ಥಾಯ್ಲೆಂಡ್‌ ದೇಶಗಳಲ್ಲಿಯೂ ವಿದೇಶಿ ಬಂಡವಾಳ ಹೂಡಿಕೆ ಆಗಿದೆ. ಇಂಡೊನೇಷ್ಯಾ, ಥಾಯ್ಲೆಂಡ್‌, ಬ್ರೆಜಿಲ್‌ ಮತ್ತು ರಷ್ಯಾ ಮಾರುಕಟ್ಟೆಗಳು ಸಕಾರಾತ್ಮಕ ಗಳಿಕೆ ಕಂಡುಕೊಂಡಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು