ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಷೇರುಪೇಟೆಯಲ್ಲಿ ವಿದೇಶಿ ಹೂಡಿಕೆ ಹೆಚ್ಚಳ

Last Updated 18 ನವೆಂಬರ್ 2020, 14:12 IST
ಅಕ್ಷರ ಗಾತ್ರ

ನವದೆಹಲಿ: ವಿದೇಶಿ ಹೂಡಿಕೆದಾರರು ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ಷೇರುಪೇಟೆಗಳಲ್ಲಿ ₹ 46,620 ಕೋಟಿ ಹೂಡಿಕೆ ಮಾಡಿದ್ದಾರೆ. ಆರ್ಥಿಕ ಚಟುವಟಿಕೆಗಳು ಮತ್ತೆ ಆರಂಭ ಆಗುತ್ತಿರುವುದರಿಂದ ಈ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಆಗಿದೆ ಎಂದು ಮಾರ್ನಿಂಗ್‌ ಸ್ಟಾರ್‌ ವರದಿ ತಿಳಿಸಿದೆ.

ಜೂನ್‌ ತ್ರೈಮಾಸಿಕದಲ್ಲಿ ₹ 28,860 ಕೋಟಿ ಹೂಡಿಕೆ ಮಾಡಿದ್ದರು. ಇದಕ್ಕೆ ಹೋಲಿಸಿದರೆ ಸೆಪ್ಟೆಂಬರ್‌ ತ್ರೈಮಾಸಿಕದ ಹೂಡಿಕೆಯಲ್ಲಿ ಏರಿಕೆ ಕಂಡುಬಂದಿದೆ.

ಷೇರುಪೇಟೆಯ ಮಾರುಕಟ್ಟೆ ಬಂಡವಾಳಕ್ಕೆ ವಿದೇಶಿ ಬಂಡವಾಳ ಹೂಡಿಕೆದಾರರ (ಎಫ್‌ಪಿಐ) ಕೊಡುಗೆಯು ಜೂನ್‌ ತ್ರೈಮಾಸಿಕದಲ್ಲಿ ಶೇಕಡ 18.7ರಷ್ಟಿತ್ತು. ಇದು ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ಶೇಕಡ 21.4ಕ್ಕೆ ದಾಖಲೆಯ ಏರಿಕೆ ಕಂಡಿದೆ. ಈ ಹಿಂದೆ, 2015 ಮಾರ್ಚ್‌ನಲ್ಲಿ ಶೇ 20.5ರಷ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT