ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್‌ಐಸಿ ಐಪಿಒ: ಮೇ 12ರವರೆಗೆ ಅವಕಾಶ

Last Updated 13 ಮಾರ್ಚ್ 2022, 12:53 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಗೆ (ಸೆಬಿ) ಈಗಾಗಲೇ ಸಲ್ಲಿಸಿರುವ ಕರಡು ದಾಖಲೆಪತ್ರಗಳ ಆಧಾರದ ಮೇಲೆ ಎಲ್‌ಐಸಿ ಐಪಿಒ ಪ್ರಕ್ರಿಯೆ ನಡೆಸಲು ಮೇ 12ರವರೆಗೆ ಅವಕಾಶ ಇದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಒಂದೊಮ್ಮೆ ಸರ್ಕಾರವು ಮೇ 12ರ ಒಳಗಾಗಿ ಐಪಿಒ ನಡೆಸಲು ವಿಫಲವಾದರೆ, ಡಿಸೆಂಬರ್‌ ತ್ರೈಮಾಸಿಕದ ಆರ್ಥಿಕ ಸಾಧನೆ ಮತ್ತು ನಿಗಮದ ಒಟ್ಟಾರೆ ಮೌಲ್ಯದ ವಿವರದೊಂದಿಗೆ ಸೆಬಿಗೆ ದಾಖಲೆಪತ್ರಗಳನ್ನು ಹೊಸದಾಗಿ ಸಲ್ಲಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಎಲ್‌ಐಸಿ ಐಪಿಒ ಮೂಲಕ ಕೇಂದ್ರ ಸರ್ಕಾರವು ₹ 60 ಸಾವಿರ ಕೋಟಿ ಬಂಡವಾಳ ಸಂಗ್ರಹಿಸುವ ನಿರೀಕ್ಷೆ ಇಟ್ಟುಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT