ಶುಕ್ರವಾರ, ಅಕ್ಟೋಬರ್ 22, 2021
29 °C

ನಕಾರಾತ್ಮಕ ವಹಿವಾಟು: ಸಂಪತ್ತು ₹ 2.57 ಲಕ್ಷ ಕೋಟಿ ಇಳಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಜಾಗತಿಕ ಷೇರುಪೇಟೆಗಳಲ್ಲಿ ಕಂಡುಬಂದ ಮಾರಾಟದ ಒತ್ತಡಕ್ಕೆ ಒಳಗಾಗಿ ದೇಶಿ ಷೇರುಪೇಟೆಗಳಲ್ಲಿ ಬುಧವಾರ ನಕಾರಾತ್ಮಕ ವಹಿವಾಟು ನಡೆಯಿತು.

ಕಚ್ಚಾತೈಲ ದರ ಏರಿಕೆ ಮತ್ತು ಪೂರೈಕೆ ವ್ಯವಸ್ಥೆಯಲ್ಲಿನ ಅಡಚಣೆಯಿಂದಾಗಿ ಹಣದುಬ್ಬರ ಏರಿಕೆ ಆಗುವ ಆತಂಕ ಎದುರಾಗಿದೆ. ಇದು ಜಾಗತಿಕ ಮಟ್ಟದಲ್ಲಿ ಆರ್ಥಿಕ ಚೇತರಿಕೆಯ ಮೇಲೆ ಪರಿಣಾಮ ಉಂಟುಮಾಡಿದೆ ಎಂದು ತಜ್ಞರು ಹೇಳಿದ್ದಾರೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 555 ಅಂಶ ಇಳಿಕೆಯಾಗಿ 59,189 ಅಂಶಗಳಿಗೆ ತಲುಪಿತು. ಹೂಡಿಕೆದಾರರ ಸಂಪತ್ತು ಮೌಲ್ಯವು ₹ 2.57 ಲಕ್ಷ ಕೋಟಿಯಷ್ಟು ಕರಗಿದ್ದು, ಷೇರುಪೇಟೆಯ ಒಟ್ಟಾರೆ ಬಂಡವಾಳ ಮೌಲ್ಯ ₹ 262 ಲಕ್ಷ ಕೋಟಿಗೆ ಇಳಿಕೆ ಆಗಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 176 ಅಂಶ ಇಳಿಕೆ ಕಂಡು 17,646 ಅಂಶಗಳಿಗೆ ತಲುಪಿತು.

ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯವು 54 ಪೈಸೆ ಇಳಿಕೆ ಆಗಿದ್ದು ಸಹ ದೇಶಿ ಷೇರುಪೇಟೆಗಳ ಮೇಲೆ ಪರಿಣಾಮ ಉಂಟುಮಾಡಿದೆ ಎಂದು ವಹಿವಾಟುದಾರರು ಹೇಳಿದ್ದಾರೆ. ದಿನದ ವಹಿವಾಟಿನಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ ₹ 74.98ರಂತೆ ವಿನಿಮಯಗೊಂಡಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.