ಸೋಮವಾರ, ಜನವರಿ 17, 2022
22 °C

ಹೂಡಿಕೆದಾರರ ಸಂಪತ್ತು ₹6.34 ಲಕ್ಷ ಕೋಟಿ ವೃದ್ಧಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಂಬೈ ಷೇರುಪೇಟೆಯ ವಾರದ ವಹಿವಾಟು ಸಕಾರಾತ್ಮಕವಾಗಿ ಅಂತ್ಯವಾಗಿದೆ. ಇದರಿಂದಾಗಿ ಮುಂಬೈ ಷೇರುಪೇಟೆಯಲ್ಲಿ ಹೂಡಿಕೆದಾರರ ಸಂಪತ್ತು ಮೌಲ್ಯವು ₹ 6.34 ಲಕ್ಷ ಕೋಟಿಗಳಷ್ಟು ವೃದ್ಧಿಯಾಗಿದೆ. ಷೇರುಪೇಟೆಯಲ್ಲಿ ನೋಂದಾಯಿತ ಕಂಪನಿಗಳ ಒಟ್ಟಾರೆ ಬಂಡವಾಳ ಮೌಲ್ಯವು ₹ 272.34 ಲಕ್ಷ ಕೋಟಿಗಳಿಗೆ ಏರಿಕೆಯಾಗಿದೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ ಒಂದು ವಾರದಲ್ಲಿ 1,490 ಅಂಶಗಳಷ್ಟು ಹೆಚ್ಚಾಗಿ, 59,744 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 458 ಅಂಶಗಳಷ್ಟು ಹೆಚ್ಚಾಗಿ, 17,812 ಅಂಶಗಳಿಗೆ ತಲುಪಿದೆ.

ಬಂಡವಾಳ ಮಾರುಕಟ್ಟೆಯಲ್ಲಿ ಈ ವಾರ ವಿದೇಶಿ ಸಾಂಸ್ಥಿಕ ಹೂಡಿಕೆಯಲ್ಲಿ ಏರಿಳಿತ ಕಂಡುಬಂದಿದೆ.

ದೇಶದ ಆರ್ಥಿಕ ಬೆಳವಣಿಗೆಯನ್ನು ಸೂಚಿಸುವ ಚಿಲ್ಲರೆ ಮತ್ತು ಸಗಟು ಹಣದುಬ್ಬರದ ಅಂಕಿ–ಅಂಶಗಳು ಹಾಗೂ ಕೈಗಾರಿಕಾ ಉತ್ಪಾದನೆ ಸೂಚ್ಯಂಕವು ಮುಂದಿನ ದಿನಗಳಲ್ಲಿ ಷೇರುಪೇಟೆಯ ವಹಿವಾಟಿನ ಮೇಲೆ ಪ್ರಭಾವ ಬೀರಲಿವೆ ಎಂದು ತಜ್ಞರು ಹೇಳಿದ್ದಾರೆ.

ಜಾಗತಿಕ ಷೇರುಪೇಟೆಗಳ ವಹಿವಾಟಿನ ದಿಕ್ಕಿನ ಜೊತೆಗೆ ಕೋವಿಡ್‌ ಹರಡುವಿಕೆ ಮತ್ತು ಕೊರೊನಾದ ಹೊಸ ತಳಿ ಓಮೈಕ್ರಾನ್‌ ಉಂಟುಮಾಡಲಿರುವ ಪರಿಣಾಮಗಳು ಸಹ ಷೇರುಪೇಟೆಯ ವಹಿವಾಟಿನ ಚಲನೆಯನ್ನು ನಿರ್ಧರಿ
ಸಲಿವೆ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.

ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ವಾರದ ವಹಿವಾಟಿನಲ್ಲಿ ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯವು 5 ಪೈಸೆಗಳಷ್ಟು ಇಳಿಕೆ ಆಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು