ಗುರುವಾರ , ಜೂನ್ 24, 2021
22 °C

ಸಾಮಾಜಿಕ ಭದ್ರತಾ ಯೋಜನೆ: ಆಧಾರ್‌ ಮಾಹಿತಿ ಕೇಳಿದ ಸಚಿವಾಲಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಸಾಮಾಜಿಕ ಭದ್ರತಾ ಸಂಹಿತೆ 2020ರ ಅಡಿಯಲ್ಲಿ ವಿವಿಧ ಯೋಜನೆಗಳಿಗೆ ನೋಂದಣಿ, ಸೇವೆಗಳನ್ನು ಪಡೆಯಲು ಉದ್ಯೋಗಿಗಳು ಮತ್ತು ಅಸಂಘಟಿತ ವಲಯದ ಕಾರ್ಮಿಕರು ಆಧಾರ್‌ ಸಂಖ್ಯೆ ನೀಡಬೇಕು ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಹೇಳಿದೆ.

‘ಸಂಹಿತೆಯಡಿ, ಫಲಾನುಭವಿಗಳ ಆಧಾರ್ ಸಂಖ್ಯೆಯನ್ನು ಸಂಗ್ರಹಿಸಲು ಆರಂಭಿಸುತ್ತೇವೆ. ವಲಸೆ ಕಾರ್ಮಿಕರನ್ನೂ ಒಳಗೊಂಡು ಅಸಂಘಟಿತ ವಲಯದ ಕಾರ್ಮಿಕರ ದತ್ತಾಂಶ ದಾಖಲಿಸಲು ಆಧಾರ್‌ ಅಗತ್ಯ. ಆದರೆ, ಆಧಾರ್‌ ಮಾಹಿತಿ ಕೊಡದೇ ಇರುವ ಕಾರಣಕ್ಕಾಗಿ ಸೇವೆಗಳನ್ನು ನಿರಾಕರಿಸುವಂತಿಲ್ಲ’ ಎಂದು ಕಾರ್ಮಿಕ ಕಾರ್ಯದರ್ಶಿ ಅಪೂರ್ವಚಂದ್ರ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು