ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಷೇರುಪೇಟೆ ಬಂಡವಾಳ ₹ 220 ಲಕ್ಷ ಕೋಟಿಗೆ ಏರಿಕೆ

Last Updated 27 ಮೇ 2021, 15:49 IST
ಅಕ್ಷರ ಗಾತ್ರ

ನವದೆಹಲಿ/ಮುಂಬೈ: ಮುಂಬೈ ಷೇರುಪೇಟೆಯಲ್ಲಿ (ಬಿಎಸ್‌ಇ) ಗುರುವಾರ ನಡೆದ ಸಕಾರಾತ್ಮಕ ವಹಿವಾಟಿನಿಂದಾಗಿ ಮಾರುಕಟ್ಟೆ ಬಂಡವಾಳ ಮೌಲ್ಯವು ದಾಖಲೆಯ ₹ 220.74 ಲಕ್ಷ ಕೋಟಿಗೆ ಏರಿಕೆ ಕಂಡಿದೆ.

ಗುರುವಾರದ ವಹಿವಾಟಿನಲ್ಲಿ ಬಿಎಸ್‌ಇ ಸೆನ್ಸೆಕ್ಸ್‌ 98 ಅಂಶ ಹೆಚ್ಚಾಗಿ 51,115 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ. ಎರಡು ದಿನಗಳ ವಹಿವಾಟಿನಲ್ಲಿ ಹೂಡಿಕೆದಾರರ ಸಂಪತ್ತು ₹ 1.67 ಲಕ್ಷ ಕೋಟಿಯಷ್ಟು ಏರಿಕೆ ಕಂಡಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 38 ಅಂಶ ಹೆಚ್ಚಾಗಿ 15,337ಕ್ಕೆ ತಲುಪಿದೆ.

ಗುರುವಾರ ಸರ್ಕಾರಿ ಸಾಲಪತ್ರಗಳ ಮೇ ತಿಂಗಳ ವಹಿವಾಟಿನ ಅಂತ್ಯದ ದಿನವಾಗಿತ್ತು. ಇದರಿಂದಾಗಿ ಚಂಚಲತೆ ಇದ್ದರೂ ಸಕಾರಾತ್ಮಕವಾಗಿಯೇ ವಹಿವಾಟು ಅಂತ್ಯವಾಗಿದೆ. ಮಿಡ್‌ ಮತ್ತು ಸ್ಮಾಲ್‌ ಕ್ಯಾಪ್‌ ಷೇರುಗಳಲ್ಲಿ ಖರೀದಿ ವಹಿವಾಟು ಕಂಡುಬಂದು, ಅವು ಉತ್ತಮ ಗಳಿಕೆಯನ್ನೂ ಕಂಡವು ಎಂದು ರಿಲಯನ್ಸ್‌ ಸೆಕ್ಯುರಿಟೀಸ್‌ನ ಯೋಜನಾ ಮುಖ್ಯಸ್ಥ ವಿನೋದ್‌ ಮೋದಿ ಹೇಳಿದ್ದಾರೆ.

ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ 17 ಪೈಸೆ ಹೆಚ್ಚಾಗಿ ಒಂದು ಡಾಲರ್‌ಗೆ ₹ 72.60ರಂತೆ ವಿನಿಮಯಗೊಂಡಿತು. ಇದು ಎರಡು ತಿಂಗಳ ಗರಿಷ್ಠ ಮಟ್ಟವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT