ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್ಥಿಕ ಚಟುವಟಿಕೆಗಳ ಆರಂಭ: ಐದನೇ ದಿನವೂ ಸೂಚ್ಯಂಕ ಏರಿಕೆ

Last Updated 2 ಜೂನ್ 2020, 19:45 IST
ಅಕ್ಷರ ಗಾತ್ರ

ಮುಂಬೈ: ದೇಶದ ಷೇರುಪೇಟೆಗಳಲ್ಲಿ ಸತತ ಐದನೇ ದಿನವೂ ಸೂಚ್ಯಂಕಗಳು ಏರಿಕೆ ಕಂಡುಕೊಂಡಿವೆ.

ಆರ್ಥಿಕ ಚಟುವಟಿಕೆಗಳು ಮತ್ತೆ ಆರಂಭವಾಗಿರುವುದರ ಜತೆಗೆ ಉದ್ಯಮಗಳಿಗೆ ಇನ್ನೂ ಹೆಚ್ಚಿನ ಬೆಂಬಲ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿರುವುದು ಹೂಡಿಕೆದಾರರ ವಿಶ್ವಾಸ ಹೆಚ್ಚಿಸುವಂತೆ ಮಾಡಿತು. ಇದರಿಂದ ಸಕಾರಾತ್ಮಕ ವಹಿವಾಟು ನಡೆಯಿತು ಎಂದು ತಜ್ಞರು ಹೇಳಿದ್ದಾರೆ.

ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕ 522 ಅಂಶ ಏರಿಕೆ ಕಂಡು 33,825 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸೂಚ್ಯಂಕ ನಿಫ್ಟಿ 153 ಅಂಶ ಹೆಚ್ಚಾಗಿ 9,979 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

ಅಮೆರಿಕ–ಚೀನಾ ಬಿಕ್ಕಟ್ಟು ಮತ್ತು ಪ್ರತಿಭಟನೆಗಳು ಷೇರುಪೇಟೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ವಿಶ್ಲೇಷಕರು ಹೇಳಿದ್ದಾರೆ.

ದಿನದ ವಹಿವಾಟಿನಲ್ಲಿ ಬಜಾಜ್‌ ಫೈನಾನ್ಸ್‌ ಷೇರು ಶೇ 8ರಷ್ಟು ಗರಿಷ್ಠ ಗಳಿಕೆ ಕಂಡುಕೊಂಡಿತು. ಬಿಎಸ್‌ಇ ಮಧ್ಯಮ ಮತ್ತು ಸಣ್ಣ ಶ್ರೇಣಿ ಸೂಚ್ಯಂಕಗಳು ಶೇ 1.83ರಷ್ಟು ಏರಿಕೆಯಾಗಿವೆ.

ರೂಪಾಯಿ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್‌ ಎದುರು ರೂಪಾಯಿ ಮೌಲ್ಯ 18 ಪೈಸೆ ಹೆಚ್ಚಾಗಿ ಒಂದು ಡಾಲರ್‌ಗೆ ₹75.36ರಂತೆ ವಿನಿಮಯಗೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT