ಭಾನುವಾರ, ಸೆಪ್ಟೆಂಬರ್ 26, 2021
28 °C
ಸಕಾರಾತ್ಮಕ ಅಂತ್ಯ ಕಂಡ ವಾರದ ವಹಿವಾಟು

ಹೂಡಿಕೆದಾರರ ಸಂಪತ್ತು ವೃದ್ಧಿ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ದೇಶದ ಷೇರುಪೇಟೆಗಳ ವಾರದ ವಹಿವಾಟು ಸಕಾರಾತ್ಮಕ ಅಂತ್ಯ ಕಂಡಿದೆ. ಹೂಡಿಕೆದಾರರ ಸಂಪತ್ತು ಮೌಲ್ಯ ₹ 2.14 ಲಕ್ಷ ಕೋಟಿಗಳಷ್ಟು ಹೆಚ್ಚಾಗಿದೆ.

ಮುಂಬೈ ಷೇರುಪೇಟೆಯ (ಬಿಎಸ್‌ಇ) ಬಂಡವಾಳ ಮೌಲ್ಯ ₹ 140.28 ಲಕ್ಷ ಕೋಟಿಯಿಂದ ₹ 142.42 ಲಕ್ಷ ಕೋಟಿಗೆ ಏರಿಕೆಯಾಗಿದೆ.

ಬಿಎಸ್ಇ ಸಂವೇದಿ ಸೂಚ್ಯಂಕ 403 ಅಂಶ ಏರಿಕೆ ಕಂಡು 37,385 ಅಂಶಗಳಲ್ಲಿ ವಾರದ ವಹಿವಾಟು ಅಂತ್ಯವಾಗಿದೆ. ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸೂಚ್ಯಂಕ ನಿಫ್ಟಿ 130 ಅಂಶ ಹೆಚ್ಚಾಗಿ 11,080 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

ವಿದೇಶಿ ಹೂಡಿಕೆದಾರರು (ಎಫ್‌ಪಿಐ) ಷೇರುಗಳ ಖರೀದಿಗೆ ಗಮನ ನೀಡುತ್ತಿದ್ದಾರೆ. ವಾರದ ವಹಿವಾಟಿನಲ್ಲಿ ₹ 1,307 ಕೋಟಿಗೂ ಅಧಿಕ ಮೌಲ್ಯದ ಷೇರುಗಳನ್ನು ಖರೀದಿ ಮಾಡಿದ್ದಾರೆ.

ಸಕಾರಾತ್ಮಕ ಅಂಶ: ಗ್ರಾಹಕ ದರ ಸೂಚ್ಯಂಕ (ಸಿಪಿಐ) ಆಧರಿಸಿದ ಚಿಲ್ಲರೆ ಹಣದುಬ್ಬರ ಆರ್‌ಬಿಐ ನಿಗದಿಪಡಿಸಿರುವ ಶೇ 4ಕ್ಕಿಂತಲೂ ಕೆಳಮಟ್ಟದಲ್ಲಿದೆ. ಇದರಿಂದಾಗಿ ಉದ್ಯಮ ವಲಯದಲ್ಲಿ ಅಕ್ಟೋಬರ್‌ನಲ್ಲಿ ಬಡ್ಡಿದರ ಕಡಿತದ ನಿರೀಕ್ಷೆ ವ್ಯಕ್ತವಾಗಿದೆ. 

ವಾಣಿಜ್ಯ ಸಮರ ನಿಲ್ಲಿಸುವ ನಿಟ್ಟಿನಲ್ಲಿ ಮಾತುಕತೆ ಮುಂದುವರಿಸಲು ಅಮೆರಿಕ ಮತ್ತು ಚೀನಾ ದೇಶಗಳು ನಿರ್ಧರಿಸಿವೆ. ಇದು ಹೂಡಿಕೆ ಚಟುವಟಿಕೆಯನ್ನು ಹೆಚ್ಚಾಗುವಂತೆ ಮಾಡಿದೆ.

ರೂಪಾಯಿ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ 7 ದಿನಗಳಲ್ಲಿ 147 ಪೈಸೆಗಳಷ್ಟು ಏರಿಕೆ ಕಂಡುಕಂಡಿದ್ದು, ₹ 70.92ಕ್ಕೆ ತಲುಪಿದೆ. ಬ್ರೆಂಟ್‌ ತೈಲ ದರ ಶೇ 0.07ರಷ್ಟು ಇಳಿಕೆಯಾಗಿ ಒಂದು ಬ್ಯಾರೆಲ್‌ಗೆ 60.34 ಡಾಲರ್‌ಗಳಿಗೆ ತಲುಪಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು