ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಹ್ರಿಕ್–ಈ–ಹುರಿಯತ್ ಕಾನ್ಫರೆನ್ಸ್‌ ಅಧ್ಯಕ್ಷ ಸ್ಥಾನಕ್ಕೆ ಪ್ರತ್ಯೇಕತಾವಾದಿ ಮುಖಂಡ ಸಯ್ಯದ್‌ ಅಲಿ ಷಾ ಗಿಲಾನಿ ರಾಜೀನಾಮೆ

Last Updated 19 ಮಾರ್ಚ್ 2018, 10:03 IST
ಅಕ್ಷರ ಗಾತ್ರ

ಶ್ರೀನಗರ: ಕಾಶ್ಮೀರಿ ಪ್ರತ್ಯೇಕತಾವಾದಿ ಮುಖಂಡ ಸಯ್ಯದ್‌ ಅಲಿ ಷಾ ಗಿಲಾನಿ ಅವರು ತೆಹ್ರಿಕ್–ಈ–ಹುರಿಯತ್ ಕಾನ್ಫರೆನ್ಸ್‌ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ.

ತೆರವುಗೊಂಡ ಸ್ಥಾನಕ್ಕೆ ಹುರಿಯತ್ ಸಂಘಟನೆಯ ಹಿರಿಯ ನಾಯಕ ಮೊಹಮ್ಮದ್ ಅಶ್ರಫ್ ಸೆಹ್ರಾಯ್ ಅವರನ್ನು ನೇಮಕ ಮಾಡಲಾಗಿದೆ.

ಈ ಬಗ್ಗೆ ಶ್ರೀನಗರದಲ್ಲಿನ ಕಚೇರಿಯಲ್ಲಿ ಸಭೆ ನಡೆಸಿದ ಗಿಲಾನಿ ಅವರು, ‘ಹುರಿಯತ್ ಸಂಘಟನೆಯ ಹಿರಿಯ ನಾಯಕ ಮೊಹಮ್ಮದ್ ಅಶ್ರಫ್ ಸೆಹ್ರಾಯ್ ಅವರು ತೆಹ್ರಿಕ್–ಈ–ಹುರಿಯತ್ ಕಾನ್ಫರೆನ್ಸ್‌ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ’ ಎಂದು ಘೋಷಿಸಿದರು.‌

ಗಿಲಾನಿ ಅವರು ಜಮ್ಮು ಕಾಶ್ಮೀರದ ಸಪೋರೆ ವಲಯದಲ್ಲಿ ಮೂರು ಬಾರಿ ಶಾಸಕರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT