ಮಂಗಳವಾರ, ಸೆಪ್ಟೆಂಬರ್ 28, 2021
21 °C

ಹಲವು ದೇಶಗಳಲ್ಲಿ ಕೋವಿಡ್ ಮತ್ತೆ ಹೆಚ್ಚಳ: ಇಳಿಕೆ ಕಂಡ ಸೆನ್ಸೆಕ್ಸ್

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ವಿಶ್ವದ ಹಲವು ದೇಶಗಳಲ್ಲಿ ಕೋವಿಡ್–19 ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳ ಕಂಡುಬಂದ ಪರಿಣಾಮವಾಗಿ ಜಾಗತಿಕ ಷೇರು ಮಾರುಕಟ್ಟೆಗಳಲ್ಲಿ ಎಚ್ಚರಿಕೆಯ ವಹಿವಾಟು ನಡೆಯಿತು. ದೇಶದಲ್ಲಿ ಕೂಡ ಹೂಡಿಕೆದಾರರು ಹೆಚ್ಚು ರಿಸ್ಕ್‌ ಇರುವ ಷೇರುಗಳ ಮೇಲಿನ ಹೂಡಿಕೆಯನ್ನು ತಗ್ಗಿಸಿದರು. ಇದರಿಂದಾಗಿ ಸಂವೇದಿ ಸೂಚ್ಯಂಕಗಳು ಸತತ ಎರಡನೆಯ ದಿನವೂ ಇಳಿಕೆಯ ಹಾದಿಯಲ್ಲಿ ಸಾಗಿದವು.

ರೂಪಾಯಿ ಮೌಲ್ಯ ಕುಸಿದಿದ್ದು ಹಾಗೂ ಕೇಂದ್ರ ಸರ್ಕಾರ ಘೋಷಿಸಿರುವ ಆರ್ಥಿಕ ಪ್ಯಾಕೇಜ್‌ನ ವಿತ್ತೀಯ ಪರಿಣಾಮಗಳು ಕೂಡ ಹೂಡಿಕೆದಾರರ ಆಸಕ್ತಿ ತಗ್ಗಿಸಿದವು ಎಂದು ವರ್ತಕರು ಹೇಳಿದ್ದಾರೆ. ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 185 ಅಂಶ ಇಳಿಕೆ ಕಂಡಿತು, ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ ನಿಫ್ಟಿ 66 ಅಂಶ ಇಳಿಕೆ ದಾಖಲಿಸಿತು.

‘ಕೇಂದ್ರ ಸರ್ಕಾರವು ಉತ್ತೇಜನಾ ಪ್ಯಾಕೇಜ್‌ ಘೋಷಿಸಿದ್ದರೂ, ಏಷ್ಯಾದ ಹಲವೆಡೆ ಕೊರೊನಾ ಪ್ರಕರಣಗಳು ಜಾಸ್ತಿ ಆಗಿದ್ದರಿಂದಾಗಿ ಮಾರುಕಟ್ಟೆಯಲ್ಲಿ ನಕಾರಾತ್ಮಕ ವಹಿವಾಟು ನಡೆಯಿತು’ ಎಂದು ಜಿಯೋಜಿತ್ ಫೈನಾನ್ಶಿಯಲ್ ಸರ್ವಿಸಸ್‌ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.

ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 4 ಪೈಸೆಯಷ್ಟು ತಗ್ಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು