ಮುಂಬೈ: ಹಣಕಾಸು ಮತ್ತು ಬ್ಯಾಂಕಿಂಗ್ ವಲಯದ ಷೇರುಗಳ ಮೌಲ್ಯ ಹೆಚ್ಚಳವು ದೇಶದ ಷೇರುಪೇಟೆಗಳಲ್ಲಿ ಗುರುವಾರ ಸಕಾರಾತ್ಮಕ ವಹಿವಾಟು ಮರಳುವಂತೆ ಮಾಡಿವೆ.

ಮುಂಬೈ ಷೇರುಪೇಟೆ (ಬಿಎಸ್ಇ) ಸಂವೇದಿ ಸೂಚ್ಯಂಕ ದಿನದ ವಹಿವಾಟಿನಲ್ಲಿ 36,806 ಅಂಶಗಳ ಗರಿಷ್ಠ ಮಟ್ಟಕ್ಕೆ ತಲುಪಿತ್ತು. 409 ಅಂಶಗಳ ಏರಿಕೆಯೊಂದಿಗೆ 36,738 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ರಾಷ್ಟ್ರೀಯ ಷೇರುಪೇಟೆ (ಎನ್ಎಸ್ಇ) ಸೂಚ್ಯಂಕ ನಿಫ್ಟಿ 108 ಅಂಶ ಹೆಚ್ಚಾಗಿ 10,813 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ. ಎರಡೂ ಸೂಚ್ಯಂಕಗಳು ನಾಲ್ಕು ತಿಂಗಳ ಗರಿಷ್ಠ ಮಟ್ಟದಲ್ಲಿ ವಹಿವಾಟು ಅಂತ್ಯಗೊಳಿಸಿವೆ.

ಬಜಾಜ್ ಫೈನಾನ್ಸ್ ಕಂಪನಿ ಷೇರು ಶೇ 3.93ರಷ್ಟು ಗರಿಷ್ಠ ಏರಿಕೆ ಕಂಡಿತು. ಎಸ್ಬಿಐ, ಟಾಟಾ ಸ್ಟೀಲ್, ಎಚ್ಡಿಎಫ್ಸಿ, ಬಜಾಜ್ ಫಿನ್ಸರ್ವ್, ಎಚ್ಸಿಎಲ್ ಟೆಕ್ ಮತ್ತು ಆ್ಯಕ್ಸಿಸ್ ಬ್ಯಾಂಕ್ ಷೇರುಗಳ ಮೌಲ್ಯವೂ ಹೆಚ್ಚಾಗಿದೆ.

ಮಾರುಕಟ್ಟೆ ಮೌಲ್ಯದ ಲೆಕ್ಕದಲ್ಲಿ, ಎಚ್ಡಿಎಫ್ಸಿ, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಎಚ್ಡಿಎಫ್ಸಿ ಬ್ಯಾಂಕ್ ಸೂಚ್ಯಂಕದ ಏರಿಕೆಗೆ ಉತ್ತಮ ಕೊಡುಗೆ ನೀಡಿವೆ.

ಭಾರತವು ಹೂಡಿಕೆದಾರ ಸ್ನೇಹಿಯಾಗಿದೆ. ಸ್ಪರ್ಧಾತ್ಮಕ ವ್ಯಾಪಾರ ವಹಿವಾಟು ನಡೆಸಲು ಪೂರಕವಾದ ವಾತಾವಾರಣ ಕಲ್ಪಿಸಿದೆ. ಹೂಡಿಕೆಗೆ ಹೆಚ್ಚಿನ ಅವಕಾಶಗಳಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂಡಿಯಾ ಗ್ಲೋಬಲ್ ವೀಕ್ನಲ್ಲಿ ಹೇಳಿದ್ದಾರೆ. ಇದು ಷೇರುಪೇಟೆಯಲ್ಲಿ ಉತ್ಸಾಹ ಮೂಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.