ಶುಕ್ರವಾರ, ಜನವರಿ 27, 2023
27 °C

ಷೇರುಪೇಟೆ: ಎಂಟು ದಿನಗಳ ಗಳಿಕೆಗೆ ವಿರಾಮ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಎಂಟು ದಿನಗಳ ಗಳಿಕೆಯ ಓಟಕ್ಕೆ ವಿರಾಮ ನೀಡಿರುವ ದೇಶದ ಷೇರುಪೇಟೆಗಳು, ಶುಕ್ರವಾರದ ವಹಿವಾಟಿನಲ್ಲಿ ಕುಸಿತ ಕಂಡಿವೆ. ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 415 ಅಂಶ, ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 116 ಅಂಶ ಇಳಿಕೆ ಕಂಡಿವೆ.

ದೇಶದ ಷೇರುಪೇಟೆಯಲ್ಲಿ ಹೂಡಿಕೆದಾರರು ಲಾಭ ಗಳಿಕೆಯ ಉದ್ದೇಶದಿಂದ ಷೇರುಗಳ ಮಾರಾಟಕ್ಕೆ ಗಮನ ನೀಡಿದ್ದು ಹಾಗೂ ಜಾಗತಿಕ ಷೇರು‍ಪೇಟೆಗಳಲ್ಲಿ ತೇಜಿ ವಹಿವಾಟು ಇಲ್ಲದಿದ್ದುದು ಸೂಚ್ಯಂಕಗಳ ಇಳಿಕೆಗೆ ಕಾರಣವಾದವು ಎಂದು ವರ್ತಕರು ತಿಳಿಸಿದ್ದಾರೆ.

‘ಹೂಡಿಕೆದಾರರು ಲಾರ್ಜ್‌ಕ್ಯಾಪ್‌ ವರ್ಗದ ಷೇರುಗಳನ್ನು ಲಾಭ ಗಳಿಕೆಯ ಉದ್ದೇಶದಿಂದ ಮಾರಾಟ ಮಾಡಿದರು’ ಎಂದು ಜಿಯೋಜಿತ್ ಫೈನಾನ್ಶಿಯಲ್‌ ಸರ್ವಿಸಸ್‌ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ. ಎಂಟು ದಿನಗಳ ಏರುಗತಿಯ ವಹಿವಾಟಿನಲ್ಲಿ ಸೆನ್ಸೆಕ್ಸ್ ಒಟ್ಟು 2,139 ಅಂಶ ಏರಿಕೆ ಕಂಡಿದೆ.

ಸೋಲ್, ಟೋಕಿಯೊ, ಶಾಂಘೈ ಮತ್ತು ಹಾಂಗ್‌ಕಾಂಗ್‌ ಷೇರುಗಳು ಇಳಿಕೆ ಕಂಡಿವೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ದರವು ಶೇ 0.13ರಷ್ಟು ಕಡಿಮೆ ಆಗಿದ್ದು ಪ್ರತಿ ಬ್ಯಾರೆಲ್‌ಗೆ 86.77ರಂತೆ ಮಾರಾಟವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು