7
ಜಾಗತಿಕ ವಾಣಿಜ್ಯ ಸಮರ ಆರಂಭವಾಗುವ ಆತಂಕ

ಪೇಟೆಯಲ್ಲಿ ಮಾರಾಟದ ಒತ್ತಡ

Published:
Updated:

ಮುಂಬೈ: ಅಮೆರಿಕ ಮತ್ತು ಚೀನಾ ಮಧ್ಯೆ ವಾಣಿಜ್ಯ ಸಮರ ಆರಂಭವಾಗುವ ಆತಂಕಕ್ಕೆ ಒಳಗಾಗಿ ಷೇರುಪೇಟೆಗಳಲ್ಲಿ ಚಂಚಲ ವಹಿವಾಟು ನಡೆಯಿತು.

ಚೀನಾದ ಸರಕುಗಳ ಮೇಲೆ ಹೆಚ್ಚುವರಿ ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಬೆದರಿಕೆ ಒಡ್ಡಿದ್ದಾರೆ. ಇದು ಜಾಗತಿಕ ಮಟ್ಟದಲ್ಲಿ ವಾಣಿಜ್ಯ ಸಮರ ಆರಂಭವಾಗುವ ಆತಂಕ ಮೂಡಿಸಿದೆ.

ಹೂಡಿಕೆದಾರರು ಷೇರುಗಳ ಮಾರಾಟಕ್ಕೆ ಗಮನ ನೀಡಿದ್ದಾರೆ. ಇದರಿಂದ ಭಾರತವನ್ನೂ ಒಳಗೊಂಡು ಜಾಗತಿಕ ಷೇರುಪೇಟೆಗಳಲ್ಲಿ ಮಾರಾಟದ ಒತ್ತಡ ಸೃಷ್ಟಿಯಾಗಿದೆ.

ಅಮೆರಿಕದ ಸರಕಿಗೆ ಸುಂಕ: ಅಮೆರಿಕದ ಸುಂಕ ಏರಿಕೆ ನೀತಿಗೆ ಭಾರತವೂ ಪ್ರತ್ಯುತ್ತರ ನೀಡಿದ್ದು, ಬೇಳೆಕಾಳು, ಕಬ್ಬಿಣ, ಉಕ್ಕು ಉತ್ಪನ್ನಗಳನ್ನೂ ಒಳಗೊಂಡು ಆಮದಾಗುವ ಒಟ್ಟು 29 ಸರಕುಗಳ ಮೇಲಿನ ಆಮದು ಸುಂಕ ಹೆಚ್ಚಿಸಿದೆ. ಆಗಸ್ಟ್‌ 4 ರಿಂದ ಹೊಸ ಸುಂಕ ಅನ್ವಯವಾಗಲಿದೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) 67 ಅಂಶಗಳ ಅಲ್ಪ ಏರಿಕೆಯೊಂದಿಗೆ 35,689 ಅಂಶಗಳಲ್ಲಿ ವಹಿವಾಟು ಮುಕ್ತಾಯವಾಯಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 4 ಅಂಶ ಹೆಚ್ಚಾಗಿ 10,821 ಅಂಶಗಳಲ್ಲಿ ವಾರದ ವಹಿವಾಟು ಅಂತ್ಯವಾಗಿದೆ. ಲೋಹ, ಐ.ಟಿ, ತಂತ್ರಜ್ಞಾನ, , ರಿಯಲ್‌ ಎಸ್ಟೇಟ್‌, ಎಫ್‌ಎಂಸಿಜಿ, ವಾಹನ ಷೇರುಗಳು ಮಾರಾಟದ ಒತ್ತಡಕ್ಕೆ ಒಳಗಾದವು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !