ಬುಧವಾರ, ಸೆಪ್ಟೆಂಬರ್ 22, 2021
28 °C

ಮುಂಬೈ ಷೇರುಪೇಟೆ: 6 ಕಂಪನಿಗಳ ನಷ್ಟ ₹ 95,432 ಕೋಟಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಕೋವಿಡ್‌–19’ ಸೋಂಕು ಜಗತ್ತಿನಾದ್ಯಂತ ತೀವ್ರವಾಗಿ ವ್ಯಾಪಿಸುತ್ತಿದೆ. ಇದರಿಂದ ಷೇರುಪೇಟೆಯಲ್ಲಿ ನಕಾರಾತ್ಮಕ ವಹಿವಾಟು ನಡೆಯುತ್ತಿದ್ದು, ಬಂಡವಾಳ ಹೊರಹರಿವು ಹೆಚ್ಚಾಗುತ್ತಿದೆ.

ಮುಂಬೈ ಷೇರುಪೇಟೆಯಲ್ಲಿ ವಹಿವಾಟು ನಡೆಸುತ್ತಿರುವ ಕಂಪನಿಗಳ ಮಾರುಕಟ್ಟೆ ಮೌಲ್ಯದಲ್ಲಿ ಎರಡು ವಾರಗಳಿಂದ ಭಾರಿ ಇಳಿಕೆ ಕಂಡುಬರುತ್ತಿದೆ.

ಮಾರ್ಚ್‌ 2 ರಿಂದ 6ರವರೆಗೆ ನಡೆದಿರುವ ವಹಿವಾಟಿನಲ್ಲಿ ಪ್ರಮುಖ 10 ಕಂಪನಿಗಳಲ್ಲಿ 6 ಕಂಪನಿಗಳ ಮಾರುಕಟ್ಟೆ ಮೌಲ್ಯದಲ್ಲಿ ₹ 95,432 ಕೋಟಿ ಇಳಿಕೆಯಾಗಿದೆ. ರಿಲಯನ್ಸ್‌ ಇಂಡಸ್ಟ್ರೀಸ್‌ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್‌ ಹೆಚ್ಚಿನ ನಷ್ಟ ಕಂಡಿವೆ.

ರಿಲಯನ್ಸ್‌ ಇಂಡಸ್ಟ್ರೀಸ್‌ (ಆರ್‌ಐಎಲ್‌) ಮಾರುಕಟ್ಟೆ ಮೌಲ್ಯದಲ್ಲಿ ₹37,144 ಕೋಟಿ ಕಡಿಮೆಯಾಗಿದ್ದು, ಒಟ್ಟಾರೆ ಮಾರುಕಟ್ಟೆ ಮೌಲ್ಯ ₹8,05,119 ಕೋಟಿಗೆ ಇಳಿಕೆಯಾಗಿದೆ.

ಎಚ್‌ಡಿಎಫ್‌ಸಿ ಬ್ಯಾಂಕ್‌ಗೆ ₹ 23,435 ಕೋಟಿ ನಷ್ಟವಾಗಿದ್ದು, ಒಟ್ಟಾರೆ ಮಾರುಕಟ್ಟೆ ಮೌಲ್ಯ ₹6,22,110 ಕೋಟಿಗೆ ಇಳಿಕೆಯಾಗಿದೆ.

ಕೋವಿಡ್‌–19 ಸೋಂಕು ಹರಡುತ್ತಿರುವುದು ಹಾಗೂ ಯೆಸ್‌ ಬ್ಯಾಂಕ್‌ ಬಿಕ್ಕಟ್ಟು ವಾರದ ವಹಿವಾಟಿನ ಮೇಲೆ ಪರಿಣಾಮ ಬೀರಿದೆ. ಕೋವಿಡ್‌ನಿಂದಾಗಿ ಜಾಗತಿಕ ಆರ್ಥಿಕ ಹಿಂಜರಿತದ ಆತಂಕವೂ ಎದುರಾಗಿದೆ ಎಂದು ತಜ್ಞರು ವಿಶ್ಲೇಷಣೆ ಮಾಡಿದ್ದಾರೆ.

ಫೆಬ್ರುವರಿ 24 ರಿಂದ 28ರವರೆಗೆ ನಡೆದಿದ್ದ ವಹಿವಾಟಿನಲ್ಲಿ 10 ಕಂಪನಿಗಳ ಮಾರುಕಟ್ಟೆ ಮೌಲ್ಯದಲ್ಲಿ ₹ 3.35 ಲಕ್ಷ ಕೋಟಿಗಳಷ್ಟು ಇಳಿಕೆಯಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು