ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೂಪಾಯಿ 14 ಪೈಸೆ ಇಳಿಕೆ: ಸೂಚ್ಯಂಕ ಅಲ್ಪ ಚೇತರಿಕೆ

Last Updated 20 ಏಪ್ರಿಲ್ 2020, 19:48 IST
ಅಕ್ಷರ ಗಾತ್ರ

ಮುಂಬೈ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್‌ ಎದುರು ರೂಪಾಯಿ ಮೌಲ್ಯ ಸೋಮವಾರ 14 ಪೈಸೆ ಇಳಿಕೆಯಾಗಿ ಒಂದು ಡಾಲರ್‌ಗೆ ₹76.53ರಂತೆ ವಿನಿಮಯಗೊಂಡಿತು.

ದೇಶದಲ್ಲಿ ಕೊರೊನಾ ವೈರಸ್‌ ಪ್ರಕರಣಗಳು ಹೆಚ್ಚಾಗುತ್ತಿರುವುದು ಹಾಗೂ ಜಾಗತಿಕ ಮಾರುಕಟ್ಟೆಯಲ್ಲಿ ಡಾಲರ್‌ಗೆ ಬೇಡಿಕೆ ಹೆಚ್ಚಾಗಿರುವುದು ರೂಪಾಯಿ ಮೌಲ್ಯ ಇಳಿಕೆಗೆ ಕಾರಣವಾಗಿದೆ.

ಸೂಚ್ಯಂಕ ಅಲ್ಪ ಏರಿಕೆ: ಮುಂಬೈ ಷೇರುಪೇಟೆ (ಬಿಎಸ್‌ಇ) ಸೂಚ್ಯಂಕ ದಿನದ ಗರಿಷ್ಠ ಮಟ್ಟದಿಂದ ಕೆಳಗಿಳಿದು ಅಲ್ಪ ಗಳಿಕೆಯೊಂದಿಗೆ ವಹಿವಾಟು ಅಂತ್ಯಗೊಳಿಸಿತು.

60 ಅಂಶಗಳ ಏರಿಕೆಯೊಂದಿಗೆ 31,648 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸೂಚ್ಯಂಕ ನಿಫ್ಟಿ 5 ಅಂಶ ಇಳಿಕೆ ಕಂಡು 9,261 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

ಎಚ್‌ಡಿಎಫ್‌ಸಿ ಮತ್ತು ರಿಲಯನ್ಸ್‌ ಇಂಡಸ್ಟ್ರೀಸ್‌ ಷೇರುಗಳ ಗಳಿಕೆಯು ದಿನದ ವಹಿವಾಟನ್ನು ಸಕಾರಾತ್ಮಕವಾಗಿ ಅಂತ್ಯಕಾಣುವಂತೆ ಮಾಡಿತು ಎಂದು ತಜ್ಞರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT