ಶುಕ್ರವಾರ, ಡಿಸೆಂಬರ್ 6, 2019
21 °C

ಮಾರಾಟದ ಒತ್ತಡ ಸೂಚ್ಯಂಕ ಇಳಿಕೆ

Published:
Updated:

ಮುಂಬೈ: ಮಾರಾಟದ ಒತ್ತಡಕ್ಕೆ ಒಳಗಾಗಿ ದೇಶದ ಷೇರುಪೇಟೆಗಳ ವಹಿವಾಟು ಗುರುವಾರವೂ ಇಳಿಕೆ ಕಂಡಿತು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) 218 ಅಂಶ ಇಳಿಕೆ ಕಂಡು 36,324 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 76 ಅಂಶ ಇಳಿಕೆಯಾಗಿ 10,977 ಅಂಶಗಳಲ್ಲಿ ವಹಿವಾಟು ಅಂತ್ಯಕಂಡಿದೆ.

ಯೆಸ್‌ ಬ್ಯಾಂಕ್‌, ಮಾರುತಿ ಸುಜುಕಿ, ಟಾಟಾ ಮೋಟರ್ಸ್‌, ಆ್ಯಕ್ಸಿಸ್‌ ಬ್ಯಾಂಕ್‌ ಷೇರುಗಳು ನಷ್ಟ ಕಂಡಿವೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು