ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಳಿಕೆ ಕಾಯ್ದುಕೊಳ್ಳದ ಷೇರುಪೇಟೆ ವಹಿವಾಟು

Last Updated 5 ಮೇ 2020, 18:13 IST
ಅಕ್ಷರ ಗಾತ್ರ

ಮುಂಬೈ: ದೇಶದ ಷೇರುಪೇಟೆಗಳು ಆರಂಭದ ವಹಿವಾಟಿನಲ್ಲಿ ಕಂಡಿದ್ದ ಜಿಗಿತವನ್ನು ಕಾಯ್ದುಕೊಳ್ಳುವಲ್ಲಿ ವಿಫಲವಾಗಿವೆ. ಹೀಗಾಗಿ ಮಂಗಳವಾರದ ವಹಿವಾಟು ನಕಾರಾತ್ಮಕವಾಗಿಯೇ ಅಂತ್ಯಗೊಂಡಿದೆ.

ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕ ದಿನದ ಗರಿಷ್ಠ ಮಟ್ಟದಿಂದ810 ಅಂಶಗಳಷ್ಟು ನಷ್ಟ ಕಂಡು31,453 ಅಂಶಗಳಿಗೆ ಇಳಿಕೆಯಾಯಿತು. ದಿನದ ವಹಿವಾಟಿನ ಅಂತ್ಯದ ವೇಳೆಗೆ ಸೂಚ್ಯಂಕದ ಇಳಿಕೆ 262 ಅಂಶಗಳಷ್ಟಾಗಿದೆ.

ಎರಡು ದಿನಗಳಲ್ಲಿ ಹೂಡಿಕೆದಾರರ ಸಂಪತ್ತು ₹ 6.98 ಲಕ್ಷ ಕೋಟಿಗಳಷ್ಟು ಕರಗಿದೆ. ಷೇರುಪೇಟೆಯ ಬಂಡವಾಳ ಮೌಲ್ಯ ₹122 ಲಕ್ಷ ಕೋಟಿಗೆ ಇಳಿಕೆಯಾಗಿದೆ.

ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸೂಚ್ಯಂಕ ನಿಫ್ಟಿ 88 ಅಂಶ ಇಳಿಕೆ ಕಂಡು 9,205 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ರೂಪಾಯಿ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್‌ ಎದುರು ರೂಪಾಯಿ ಮೌಲ್ಯ 10 ಪೈಸೆ ಚೇತರಿಕೆ ಕಂಡು ಒಂದು ಡಾಲರ್‌ಗೆ ₹75.63ರಂತೆ ವಿನಿಮಯಗೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT