ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಿಲಯನ್ಸ್‌, ಟಿಸಿಎಸ್‌ ಮಾರುಕಟ್ಟೆ ಮೌಲ್ಯ ಇಳಿಕೆ

Last Updated 14 ನವೆಂಬರ್ 2020, 21:50 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ಷೇರುಪೇಟೆಯಲ್ಲಿ ನೋಂದಾಯಿತ ಪ್ರಮುಖ 10 ಕಂಪನಿಗಳಲ್ಲಿ ರಿಲಯನ್ಸ್‌ ಮತ್ತು ಟಿಸಿಎಸ್‌ ಮಾರುಕಟ್ಟೆ ಮೌಲ್ಯವು 13ಕ್ಕೆ ಕೊನೆಗೊಂಡ ವಾರದ ವಹಿವಾಟಿನಲ್ಲಿ ಇಳಿಕೆ ಆಗಿದೆ.

ದೇಶದ ಅತ್ಯಂತ ಮೌಲ್ಯಯುತ ಕಂಪನಿ ಆಗಿರುವ ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ನ (ಆರ್‌ಐಎಲ್‌) ಮಾರುಕಟ್ಟೆ ಮೌಲ್ಯ ₹ 22,247 ಕೋಟಿಗಳಷ್ಟು ಕಡಿಮೆ ಆಗಿದ್ದು, ಒಟ್ಟಾರೆ ಮೌಲ್ಯವು ₹ 13.49 ಲಕ್ಷ ಕೋಟಿಗಳಷ್ಟಿದೆ.

ಎರಡನೇ ಸ್ಥಾನದಲ್ಲಿರುವ ಟಿಸಿಎಸ್‌ ಮಾರುಕಟ್ಟೆ ಮೌಲ್ಯದಲ್ಲಿ ₹ 19,118 ಕೋಟಿಗಳಷ್ಟು ಕರಗಿದೆ. ಒಟ್ಟಾರೆ ₹ 9.97 ಲಕ್ಷ ಕೋಟಿ ಮಾರುಕಟ್ಟೆ ಮೌಲ್ಯವನ್ನು ಅದು ಹೊಂದಿದೆ.

ವಾರದ ವಹಿವಾಟಿನಲ್ಲಿ ಬಜಾಜ್ ಫೈನಾನ್ಸ್‌ ಗರಿಷ್ಠ ಗಳಿಕೆ ಕಂಡುಕೊಂಡಿದೆ. ಅದರ ಮಾರುಕಟ್ಟೆ ಮೌಲ್ಯ ₹ 35,965 ಕೋಟಿಗಳಷ್ಟು ಹೆಚ್ಚಾಗಿದ್ದು, ಒಟ್ಟಾರೆ ಮೊತ್ತವು ₹ 2.63 ಲಕ್ಷ ಕೋಟಿಗಳಿಗೆ ತಲುಪಿದೆ.

ಅತಿ ಹೆಚ್ಚು ಗಳಿಕೆ ಕಂಡ ಕಂಪನಿಗಳಲ್ಲಿ ಎಚ್‌ಡಿಎಫ್‌ಸಿ, ಐಸಿಐಸಿಐ ಬ್ಯಾಂಕ್‌, ಎಚ್‌ಡಿಎಫ್‌ಸಿ ಬ್ಯಾಂಕ್‌ ಹಾಗೂ ಹಿಂದುಸ್ತಾನ್‌ ಯೂನಿಲಿವರ್ ನಂತರದ ಸ್ಥಾನಗಳಲ್ಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT