ಬುಧವಾರ, ಜುಲೈ 15, 2020
22 °C

ಹಣಕಾಸು ವಲಯದ ಷೇರುಗಳಿಗೆ ನಷ್ಟ: ಸೂಚ್ಯಂಕ ಇಳಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಎಚ್‌ಡಿಎಫ್‌ಸಿ ಬ್ಯಾಂಕ್‌, ರಿಲಯನ್ಸ್‌ ಇಂಡಸ್ಟ್ರೀಸ್‌ (ಆರ್‌ಐಎಲ್‌) ಮತ್ತು ಐಸಿಐಸಿಐ ಬ್ಯಾಂಕ್‌ನ ಷೇರುಗಳ ನಷ್ಟದಿಂದಾಗಿ ಮಂಗಳವಾರ ವಹಿವಾಟು ಇಳಿಮುಖವಾಗಿ ಅಂತ್ಯಗೊಂಡಿತು.

ಸಕಾರಾತ್ಮಕವಾಗಿ ಆರಂಭವಾದ ವಹಿವಾಟು ನಂತರ ಮಾರಾಟದ ಒತ್ತಡಕ್ಕೆ ಒಳಗಾಗಿ ನಕಾರಾತ್ಮಕ ಹಾದಿಗೆ ತಲುಪಿತು.

ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕ 414 ಅಂಶ ಇಳಿಕೆ ಕಂಡು 33,956 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸೂಚ್ಯಂಕ ನಿಫ್ಟಿ 121 ಅಂಶ ಹೆಚ್ಚಾಗಿ 10,046 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ದಿನದ ವಹಿವಾಟಿನಲ್ಲಿ ಐಸಿಐಸಿಐ ಬ್ಯಾಂಕ್‌ ಷೇರು ಶೇ 3ರಷ್ಟು ಗರಿಷ್ಠ ಏರಿಕೆ ಕಂಡಿತು. ಭಾರ್ತಿ ಏರ್‌ಟೆಲ್‌, ಎಚ್‌ಡಿಎಫ್‌ಸಿ ಬ್ಯಾಂಕ್‌, ಬಜಾಜ್‌ ಫೈನಾನ್ಸ್‌, ಕೋಟಕ್‌ ಬ್ಯಾಂಕ್‌ ಮತ್ತು ಆ್ಯಕ್ಸಿಸ್‌ ಬ್ಯಾಂಕ್‌ ಷೇರುಗಳು ಸಹ ಇಳಿಕೆ ಕಂಡಿವೆ.

ದೇಶದಲ್ಲಿ ಕೋವಿಡ್‌ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ಹೀಗಾಗಿ ಹೂಡಿಕೆದಾರರು ಲಾಭಗಳಿಕೆಗೆ ಮುಂದಾಗಿದ್ದು ಸೂಚ್ಯಂಕಗಳು ಇಳಿಕೆ ಕಾಣುವಂತಾಗಿದೆ ಎಂದು ತಜ್ಞರು ವಿಶ್ಲೇಷಣೆ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು