ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರಗಿತು ಷೇರುಪೇಟೆಯ ₹10.89 ಲಕ್ಷ ಕೋಟಿ ಸಂಪತ್ತು

Last Updated 28 ನವೆಂಬರ್ 2021, 2:08 IST
ಅಕ್ಷರ ಗಾತ್ರ

ಬೆಂಗಳೂರು:ಮುಂಬೈ ಷೇರುಪೇಟೆಯಲ್ಲಿ ವಾರದ ವಹಿವಾಟು ನಕಾರಾತ್ಮಕವಾಗಿ ಅಂತ್ಯಕಂಡಿದ್ದು, ಹೂಡಿಕೆದಾರರ ಸಂಪತ್ತು ಮೌಲ್ಯವು ₹ 10.89 ಲಕ್ಷ ಕೋಟಿಗಳಷ್ಟ ಕರಗಿದೆ. ಇದರಿಂದ ಷೇರುಪೇಟೆಯ ಒಟ್ಟಾರೆ ಬಂಡವಾಳ ಮೌಲ್ಯವು ₹ 258.31 ಲಕ್ಷ ಕೋಟಿಗಳಿಗೆ ಇಳಿಕೆ ಆಗಿದೆ.

ದೇಶದ ಷೇರುಪೇಟೆಗಳಿಂದ ವಿದೇಶಿ ಬಂಡವಾಳ ಹೊರಹರಿವು ಮುಂದುವರಿದಿದೆ. ವಿದೇಶಿ ಸಾಂಸ್ಥಿಕ ಹೂಡಿಕೆ
ದಾರರು ವಾರದ ವಹಿವಾಟಿನಲ್ಲಿ ₹ 15,339 ಕೋಟಿಗೂ ಹೆಚ್ಚಿನ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ.

ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಈ ವಾರ ಷೇರುಪೇಟೆಗಳಲ್ಲಿ ಸೂಚ್ಯಂಕಗಳ ಇಳಿಕೆಗೆ ಕಾರಣವಾಯಿತು. ಜಾಗತಿಕ ಮಟ್ಟದಲ್ಲಿ ಹಣದುಬ್ಬರ ಹೆಚ್ಚಳದ ಆತಂಕವೂ ನಕಾರಾತ್ಮಕ ಪರಿಣಾಮ ಉಂಟುಮಾಡಿತು. ಈ ಕಾರಣಗಳಿಂದಾಗಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಈ ವಾರದ ಷೇರುಗಳ ಮಾರಾಟಕ್ಕೆ ಹೆಚ್ಚಿನ ಗಮನ ಹರಿಸಿದರು ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

ಅಲ್ಪಾವಧಿಗೆ ಷೇರುಪೇಟೆಯ ವಹಿವಾಟು ಕೊರೊನಾದ ಹೊಸ ತಳಿಯ ಪ್ರಭಾವಕ್ಕೆ ಒಳಗಾಗಲಿದೆ ಎಂದೂ ತಜ್ಞರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT