ಷೇರುಪೇಟೆಗಳಲ್ಲಿ ಸತತ ಐದನೇ ದಿನವೂ ವಹಿವಾಟು ಇಳಿಕೆ

7
ಸತತ ಐದನೇ ದಿನವೂ ಸೂಚ್ಯಂಕ ಇಳಿಕೆ

ಷೇರುಪೇಟೆಗಳಲ್ಲಿ ಸತತ ಐದನೇ ದಿನವೂ ವಹಿವಾಟು ಇಳಿಕೆ

Published:
Updated:

ಮುಂಬೈ: ಕಚ್ಚಾ ತೈಲ ದರ ಏರಿಕೆ, ರೂಪಾಯಿ ಮೌಲ್ಯ ಕುಸಿತ ಮತ್ತು ಜಾಗತಿಕ ವಾಣಿಜ್ಯ ಬಿಕ್ಕಟ್ಟಿನ ಪರಿಣಾಮದಿಂದ ಷೇರುಪೇಟೆಗಳಲ್ಲಿ ಕರಡಿ ತನ್ನ ಪ್ರಭಾವ ಬೀರುತ್ತಿದೆ.

ದೇಶದ ಷೇರುಪೇಟೆಗಳಲ್ಲಿ ಸತತ ಐದನೇ ದಿನವೂ ವಹಿವಾಟು ಇಳಿಕೆ ಕಂಡಿತು. ಮೂರು ತಿಂಗಳ ವಹಿವಾಟಿನಲ್ಲಿ ಅತ್ಯಂತ ದೀರ್ಘಾವಧಿಯ ಇಳಿಕೆ ಇದಾಗಿದೆ.

ಗ್ರಾಹಕ ಬಳಕೆ ವಸ್ತುಗಳು, ಹಣಕಾಸು ಮತ್ತು ಬ್ಯಾಂಕಿಂಗ್‌ ವಲಯಗಳು ಮಾರಾಟದ ಒತ್ತಡಕ್ಕೆ ಒಳಗಾದವು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) 155 ಅಂಶ ಇಳಿಕೆ ಕಂಡು, ಎರಡು ವಾರಗಳ ಕನಿಷ್ಠ ಮಟ್ಟವಾದ 38,157 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ. ಸೋಮವಾರದ ವಹಿವಾಟಿನಲ್ಲಿ ಸೂಚ್ಯಂಕ 333 ಅಂಶ ಕುಸಿದಿತ್ತು.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 62 ಅಂಶ ಇಳಿಕೆಯಾಗಿ 11,520ರಲ್ಲಿ ವಹಿವಾಟು ಅಂತ್ಯವಾಗಿದೆ.

ಕಚ್ಚಾ ತೈಲ ದರ ಏರಿಕೆಯಿಂದ ಚಾಲ್ತಿ ಖಾತೆ ಕೊರತೆ ಅಂತರ ಹೆಚ್ಚಾಗುತ್ತಿದೆ. ರೂಪಾಯಿ ಮೌಲ್ಯ ನಿರಂತರವಾಗಿ ಕುಸಿಯುತ್ತಿದೆ. ಈ ಅಂಶಗಳು  ಹೂಡಿಕೆದಾರರನ್ನು ಆತಂಕಕ್ಕೆ ದೂಡಿವೆ.

ಅಮೆರಿಕ–ಚೀನಾ ವಾಣಿಜ್ಯ ಬಿಕ್ಕಟ್ಟು ಜಾಗತಿಕ ಷೇರುಪೇಟೆಗಳಲ್ಲಿ ನಕಾರಾತ್ಮಕ ವಹಿವಾಟಿಗೆ ಕಾರಣವಾಗಿವೆ.

***

₹ 21 ಕೋಟಿ –  ವಿದೇಶಿ ಹೂಡಿಕೆದಾರರು ಮಾರಾಟ ಮಾಡಿರುವ ಷೇರುಗಳ ಮೌಲ್ಯ

₹ 542 ಕೋಟಿ – ದೇಶಿ ಸಾಂಸ್ಥಿಕ ಹೂಡಿಕೆದಾರರು ಮಾರಾಟ ಮಾಡಿರುವ ಷೇರುಗಳ ಮೌಲ್ಯ

 

 

 

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !