ಮಂಗಳವಾರ, ಮೇ 26, 2020
27 °C

ಷೇರುಪೇಟೆ: ವಾರದ ವಹಿವಾಟು ಇಳಿಮುಖ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ದೇಶದ ಷೇರುಪೇಟೆಗಳ ವಾರದ ವಹಿವಾಟು ಇಳಿಮುಖವಾಗಿ ಮುಕ್ತಾಯವಾಗಿದೆ.

ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕ 425 ಅಂಶ ಇಳಿಕೆ ಕಂಡು 30,672 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸೂಚ್ಯಂಕ ನಿಫ್ಟಿ 97 ಅಂಶ ಕಡಿಮೆಯಾಗಿ 9,039 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

ಆರ್‌ಬಿಐ ಬಡ್ಡಿದರದಲ್ಲಿ ಇಳಿಕೆ ಮಾಡಿದರೂ ಶುಕ್ರವಾರ ಷೇರುಪೇಟೆಗಳಲ್ಲಿ ಉತ್ಸಾಹ ಕಂಡುಬರಲಿಲ್ಲ.

ಕೋವಿಡ್‌–19 ಪ್ರಕರಣಗಳ ಸಂಖ್ಯೆಯೂ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಇದರ ಜತೆಗೆ ಆರ್ಥಿಕ ಉತ್ತೇಜನಕ್ಕೆ ಘೋಷಿಸಿರುವ ಕ್ರಮಗಳು ಪರಿಣಾಮಕಾರಿಯಾಗದೇ ಇರುವ ಸಾಧ್ಯತೆಯೂ ಹೂಡಿಕೆ ಚಟುವಟಿಕೆಯನ್ನು ಕುಗ್ಗುವಂತೆ ಮಾಡಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು