ಮಂಗಳವಾರ, ಜನವರಿ 31, 2023
27 °C

ಸೆನ್ಸೆಕ್ಸ್, ನಿಫ್ಟಿ ಇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಂಬೈ (ಪಿಟಿಐ): ದೇಶದ ಷೇರುಪೇಟೆಗಳು ಸೋಮವಾರದ ವಹಿವಾಟಿನಲ್ಲಿ ಶೇ 1ರವರೆಗೆ ಇಳಿಕೆ ಕಂಡವು. ಇದರಿಂದಾಗಿ ಮೂರನೇ ವಹಿವಾಟು ಅವಧಿಯೂ ನಕಾರಾತ್ಮಕ ಅಂತ್ಯ ಕಾಣುವಂತಾಯಿತು. ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್‌ 518 ಅಂಶ ಇಳಿಕೆಯಾದರೆ, ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 147 ಅಂಶ ಇಳಿಕೆ ಕಂಡಿತು.

ಸೆನ್ಸೆಕ್ಸ್‌ನಲ್ಲಿ ರಿಲಯನ್ಸ್‌ ಇಂಡಸ್ಟ್ರೀಸ್‌, ಎಚ್‌ಡಿಎಫ್‌ಸಿ, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌, ಟೆಕ್‌ ಮಹೀಂದ್ರ, ಇನ್ಫೊಸಿಸ್‌, ಬಜಾಜ್‌ ಫೈನಾನ್ಸ್‌, ವಿಪ್ರೊ ಮತ್ತು ಟಾಟಾ ಸ್ಟೀಲ್‌ ಷೇರುಗಳ ಮೌಲ್ಯ ಇಳಿಕೆ ಆಗಿದೆ. ಬ್ರೆಂಟ್‌ ಕಚ್ಚಾ ತೈಲ ದರವು ಶೇ 0.91ರಷ್ಟು ಇಳಿಕೆ ಆಗಿ ಒಂದು ಬ್ಯಾರಲ್‌ಗೆ 86.82 ಡಾಲರ್‌ಗೆ ತಲುಪಿತು.

‘ಕಚ್ಚಾ ತೈಲ ದರ ಇಳಿಕೆ ಕಂಡಿರುವುದು ದೇಶಿ ಆರ್ಥಿಕತೆಗೆ ದೊಡ್ಡ ಸಕಾರಾತ್ಮಕ ಸುದ್ದಿ. ಆದರೆ, ಜಾಗತಿಕ ಮಾರುಕಟ್ಟೆಗಳಲ್ಲಿ ನಡೆದ ಅಸ್ಥಿರ ವಹಿವಾಟಿನಿಂದಾಗಿ ದೇಶದ ಷೇರುಪೇಟೆಗಳು ಇದಕ್ಕೆ ಸೂಕ್ತವಾಗಿ ಸ್ಪಂದಿಸಲಿಲ್ಲ’ ಎಂದು ಜಿಯೋಜಿತ್‌ ಫೈನಾನ್ಶಿಯಲ್‌ ಸರ್ವಿಸಸ್‌ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್‌ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು