ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಷೇರುಪೇಟೆ: ಆರು ದಿನಗಳ ಕುಸಿತಕ್ಕೆ ತಡೆ

Last Updated 16 ಮೇ 2022, 13:59 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ ಮತ್ತು ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ ನಿಫ್ಟಿಯ ಆರು ದಿನಗಳ ಕುಸಿತಕ್ಕೆ ಸೋಮವಾರ ವಿರಾಮ ಬಿದ್ದಿದೆ. ಬ್ಯಾಂಕಿಂಗ್, ಆಟೊಮೊಬೈಲ್ ಮತ್ತು ವಿದ್ಯುತ್ ವಲಯದ ಷೇರುಗಳನ್ನು ಹೂಡಿಕೆದಾರರು ಹೆಚ್ಚಿನ ಸಂಖ್ಯೆಯಲ್ಲಿ ಖರೀದಿಸಿದ ಕಾರಣ ಸೂಚ್ಯಂಕಗಳು ಚೇತರಿಕೆ ಕಂಡುಕೊಂಡವು.

ಸೆನ್ಸೆಕ್ಸ್ 180 ಅಂಶ, ನಿಫ್ಟಿ 60 ಅಂಶ ಏರಿಕೆ ಕಂಡಿವೆ. ಐ.ಟಿ. ವಲಯದ ಹಾಗೂ ಕೆಲವು ‍ಪ್ರಮುಖ ಕಂಪನಿಗಳ ಷೇರುಗಳನ್ನು ಹೂಡಿಕೆದಾರರು ಲಾಭಗಳಿಕೆಯ ಉದ್ದೇಶದಿಂದ ಮಾರಾಟ ಮಾಡಿದರು. ಇದು ಗಳಿಕೆಯ ಓಟಕ್ಕೆ ತುಸು ಅಡ್ಡಿ ಉಂಟುಮಾಡಿತು.

‘ಹಣದುಬ್ಬರ ಹೆಚ್ಚಾಗುತ್ತಿರುವುದು ಹಾಗೂ ಅದರ ಪರಿಣಾಮವಾಗಿ ಜನ ವೆಚ್ಚ ಮಾಡುವುದು ಕಡಿಮೆ ಆಗಬಹುದು ಎಂಬುದು ಹೂಡಿಕೆದಾರರ ಚಿಂತೆಗೆ ಕಾರಣವಾಗಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಉತ್ತಮ ಸಾಧನೆ ತೋರುವ ಸಾಧ್ಯತೆ ಇರುವ ಕಂಪನಿಗಳಲ್ಲಿ ಹೂಡಿಕೆದಾರರು ಆಸಕ್ತಿ ತೋರಿಸಿದ್ದಾರೆ’ ಎಂದು ಎಲ್‌ಕೆಪಿ ಸೆಕ್ಯುರಿಟೀಸ್‌ನ ಸಂಶೋಧನಾ ಮುಖ್ಯಸ್ಥ ಎಸ್. ರಂಗನಾಥನ್ ಹೇಳಿದ್ದಾರೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ದರವು ಶೇ 0.51ರಷ್ಟು ಇಳಿಕೆಯಾಗಿ ಪ್ರತಿ ಬ್ಯಾರೆಲ್‌ಗೆ 111 ಡಾಲರ್‌ಗೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT