ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಷೇರುಪೇಟೆ: ಮುಂದುವರಿದ ಕುಸಿತ

Last Updated 20 ಏಪ್ರಿಲ್ 2021, 17:24 IST
ಅಕ್ಷರ ಗಾತ್ರ

ಮುಂಬೈ: ಸ್ಥಳೀಯವಾಗಿ ಅಲ್ಲಲ್ಲಿ ಜಾರಿಗೆ ಬರುತ್ತಿರುವ ಲಾಕ್‌ಡೌನ್‌ ಕ್ರಮಗಳು ಹಾಗೂ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವುದು ಹೂಡಿಕೆದಾರರಲ್ಲಿ ಆತಂಕ ಹೆಚ್ಚಿಸಿತು. ಮಂಗಳವಾರದ ವಹಿವಾಟಿನಲ್ಲಿ ಆರಂಭದಲ್ಲಿ ಚೇತರಿಕೆ ಕಂಡಿದ್ದ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್, ನಂತರ ಕುಸಿತ ದಾಖಲಿಸಿತು.

ಸೆನ್ಸೆಕ್ಸ್‌ 243 ಅಂಶ ಇಳಿಕೆ ಕಂಡಿತು. ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕವಾದ ನಿಫ್ಟಿ 63 ಅಂಶ ಇಳಿಕೆ ಕಂಡಿತು. ಅಲ್ಟ್ರಾಟೆಕ್‌ ಸಿಮೆಂಟ್, ಎಚ್‌ಸಿಎಲ್‌ ಟೆಕ್, ಎಚ್‌ಡಿಎಫ್‌ಸಿ, ಟೆಕ್ ಮಹೀಂದ್ರ, ಎಚ್‌ಡಿಎಫ್‌ಸಿ ಬ್ಯಾಂಕ್‌, ಎಚ್‌ಯುಎಲ್‌ ಷೇರುಗಳು ಹೆಚ್ಚು ಕುಸಿತ ಕಂಡವು.

ಬಜಾಜ್‌ ಫಿನ್‌ಸರ್ವ್‌, ಡಾ ರೆಡ್ಡೀಸ್, ಬಜಾಜ್‌ ಫೈನಾನ್ಸ್‌, ಬಜಾಜ್‌ ಆಟೊ, ಮಹೀಂದ್ರ ಆ್ಯಂಡ್ ಮಹೀಂದ್ರ ಮತ್ತು ಮಾರುತಿ ಷೇರುಗಳು ಗಳಿಕೆ ಕಂಡುಕೊಂಡವು. ‘ಆರಂಭದಲ್ಲಿ ಷೇರು ಮಾರುಕಟ್ಟೆಗಳಲ್ಲಿ ಸಕಾರಾತ್ಮಕ ವಹಿವಾಟು ನಡೆಯಿತು. ಆದರೆ, ಜಾಗತಿಕ ಮಟ್ಟದಲ್ಲಿ ನಕಾರಾತ್ಮಕ ವಹಿವಾಟು ನಡೆದಿದ್ದು ಹಾಗೂ ಮಹಾರಾಷ್ಟ್ರದಲ್ಲಿ ಇನ್ನಷ್ಟು ಕಠಿಣ ನಿರ್ಬಂಧಗಳು ಜಾರಿಯಾಗುವ ಸಾಧ್ಯತೆಯು ಸೂಚ್ಯಂಕ ಕುಸಿಯುವಂತೆ ಮಾಡಿದವು’ ಎಂದು ಜಿಯೋಜಿತ್ ಹಣಕಾಸು ಸೇವೆಗಳ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್ ತಿಳಿಸಿದರು.

ಬುಧವಾರ ರಾಮನವಮಿ ಕಾರಣ ಷೇರುಮಾರುಕಟ್ಟೆಗಳಲ್ಲಿ ವಹಿವಾಟು ಇರುವುದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT