ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆನ್ಸೆಕ್ಸ್, ನಿಫ್ಟಿ ಏರಿಕೆ

Last Updated 29 ನವೆಂಬರ್ 2022, 16:21 IST
ಅಕ್ಷರ ಗಾತ್ರ

ನವದೆಹಲಿ: ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ ಮತ್ತು ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ ಮಂಗಳವಾರದ ವಹಿವಾಟಿನಲ್ಲಿ ಏರಿಕೆ ದಾಖಲಿಸಿವೆ, ದಾಖಲೆಯ ಮಟ್ಟದಲ್ಲಿ ವಹಿವಾಟು ಕೊನೆಗೊಳಿಸಿವೆ. ಸೆನ್ಸೆಕ್ಸ್ 177 ಅಂಶ ಹಾಗೂ ನಿಫ್ಟಿ 55 ಅಂಶ ಏರಿಕೆ ಕಂಡಿವೆ.

‘ಮಾರುಕಟ್ಟೆಯು ತುಸು ಅಸ್ಥಿರವಾಗಿತ್ತು. ಹೂಡಿಕೆದಾರರು ಒಂದಿಷ್ಟು ಎಚ್ಚರಿಕೆಯಿಂದ ವಹಿವಾಟು ನಡೆಸಿದ್ದಾರೆ. ಕಠಿಣ ಲಾಕ್‌ಡೌನ್‌ ವಿರೋಧಿಸಿ ಚೀನಾದಲ್ಲಿ ಪ್ರತಿಭಟನೆಗಳು ಹೆಚ್ಚುತ್ತಿರುವುದು ಕಳವಳ ಮೂಡಿಸಿವೆ’ ಎಂದು ಕೋಟಕ್ ಸೆಕ್ಯುರಿಟೀಸ್‌ನ ಈಕ್ವಿಟಿ ಸಂಶೋಧನಾ ಮುಖ್ಯಸ್ಥ ಶ್ರೀಕಾಂತ್ ಚೌಹಾಣ್ ಹೇಳಿದ್ದಾರೆ.

ಸೋಲ್, ಶಾಂಘೈ, ಹಾಂಗ್‌ಕಾಂಗ್‌ ಮಾರುಕಟ್ಟೆಗಳು ಏರಿಕೆ ಕಂಡಿವೆ. ಟೋಕಿಯೊ ಷೇರುಪೇಟೆಯು ಇಳಿಕೆ ದಾಖಲಿಸಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯು ಪ್ರತಿ ಬ್ಯಾರೆಲ್‌ಗೆ ಶೇ 2.45ರಷ್ಟು ಜಾಸ್ತಿಯಾಗಿದ್ದು, 85.23 ಡಾಲರ್‌ಗೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT