ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆನ್ಸೆಕ್ಸ್, ನಿಫ್ಟಿ ಶೇ 1ರಷ್ಟು ಇಳಿಕೆ

Last Updated 18 ಜನವರಿ 2022, 16:55 IST
ಅಕ್ಷರ ಗಾತ್ರ

ಮುಂಬೈ: ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ ಮತ್ತು ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ ನಿಫ್ಟಿ ಮಂಗಳವಾರ ತಲಾ ಶೇ 1ರಷ್ಟು ಇಳಿಕೆ ಕಂಡವು. ಆಟೊಮೊಬೈಲ್, ಲೋಹ ಮತ್ತು ರಿಯಲ್ ಎಸ್ಟೇಟ್ ವಲಯದ ಷೇರುಗಳ ಮೌಲ್ಯ ಇಳಿಕೆಯು ಸೂಚ್ಯಂಕಗಳ ಕುಸಿತಕ್ಕೆ ಕಾರಣವಾಯಿತು. ಇದರ ಜೊತೆಗೆ ಜಾಗತಿಕ ಷೇರು ಮಾರುಕಟ್ಟೆಗಳಲ್ಲಿ ಕಂಡುಬಂದ ಕುಸಿತದ ಪ್ರಭಾವವೂ ಇತ್ತು.

ಸೆನ್ಸೆಕ್ಸ್‌ 554 ಅಂಶ ಇಳಿಕೆ ಕಂಡಿತು. ನಿಫ್ಟಿ 195 ಅಂಶ ಕುಸಿಯಿತು. ‘ತೈಲ ಬೆಲೆ ಹೆಚ್ಚಾಗಿದ್ದು, ವಿದೇಶಿ ಹೂಡಿಕೆದಾರರು ಷೇರುಗಳ ಮಾರಾಟದಲ್ಲಿ ತೊಡಗಿದ್ದುದು ದೇಶಿ ಷೇರುಪೇಟೆಗಳಲ್ಲಿ ಅಸ್ಥಿರ ವಹಿವಾಟಿಗೆ ಕಾರಣವಾದವು’ ಎಂದು ಜಿಯೋಜಿತ್ ಫೈನಾನ್ಶಿಯಲ್ ಸರ್ವಿಸಸ್‌ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್ ತಿಳಿಸಿದ್ದಾರೆ.

‘ಷೇರು ವರ್ತಕರು ಲಾಭ ಗಳಿಕೆಯ ವಹಿವಾಟಿನಲ್ಲಿ ತೊಡಗಿಕೊಂಡಿದ್ದು ಕೂಡ ಸೂಚ್ಯಂಕಗಳ ಇಳಿಕೆಗೆ ಕಾರಣವಾಯಿತು’ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ರಿಟೇಲ್ ಸಂಶೋಧನಾ ವಿಭಾಗದ ಮುಖ್ಯಸ್ಥ ದೀಪಕ್ ಜಸನಿ ಹೇಳಿದ್ದಾರೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆಯು ಶೇಕಡ 1.13ರಷ್ಟು ಹೆಚ್ಚಳ ಆಗಿದ್ದು ಪ್ರತಿ ಬ್ಯಾರೆಲ್‌ಗೆ 87.46 ಡಾಲರ್‌ಗೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT