ಬುಧವಾರ, ಆಗಸ್ಟ್ 4, 2021
21 °C

ಹಣಕಾಸು ವಲಯದ ಷೇರುಗಳ ಗಳಿಕೆ: ಸೂಚ್ಯಂಕ ಏರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಬ್ಯಾಂಕಿಂಗ್‌, ಹಣಕಾಸು ಮತ್ತು ಇಂಧನ ವಲಯದ ಷೇರುಗಳ ಗಳಿಕೆಯಿಂದ ದೇಶದ ಷೇರುಪೇಟೆಗಳಲ್ಲಿ ಬುಧವಾರ ಸಕಾರಾತ್ಮಕ ವಹಿವಾಟು ನಡೆಯಿತು.

ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕ 498 ಅಂಶ ಹೆಚ್ಚಾಗಿ 35,414 ಅಂಶಗಳಲ್ಲಿ ವಹಿವಾಟು ಅಂತ್ಯಕಂಡಿತು.

ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸೂಚ್ಯಂಕ ನಿಫ್ಟಿ 128 ಅಂಶ ಹೆಚ್ಚಾಗಿ 10,430 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

ಗಳಿಕೆ: ಆ್ಯಕ್ಸಿಸ್‌ ಬ್ಯಾಂಕ್‌ ಷೇರು ಶೇ 6.58ರಷ್ಟು ಏರಿಕೆಯಾಗಿದೆ. ಬಜಾಜ್‌ ಫಿನ್‌ಸರ್ವ್‌, ಎಚ್‌ಡಿಎಫ್‌ಸಿ, ಬಜಾಜ್‌ ಫೈನಾನ್ಸ್‌, ಐಟಿಸಿ, ಇಂಡಸ್‌ಇಂಡ್‌ ಬ್ಯಾಂಕ್‌, ಎಸ್‌ಬಿಐ, ಐಸಿಐಸಿಐ ಬ್ಯಾಂಕ್‌ ಮತ್ತು ರಿಲಯನ್ಸ್‌ ಇಂಡಸ್ಟ್ರೀಸ್‌ ಷೇರುಗಳ ಮೌಲ್ಯವೂ ಏರಿಕೆಯಾಗಿದೆ.

ಎನ್‌ಟಿಪಿಸಿ, ನೆಸ್ಲೆ ಇಂಡಿಯಾ, ಮಹೀಂದ್ರಾ, ಎಲ್‌ಆ್ಯಂಡ್‌ಟಿ ಮತ್ತು ಒಎನ್‌ಜಿಸಿ ಷೇರುಗಳ ಮೌಲ್ಯ ಶೇ 2.40ರವರೆಗೂ ಇಳಿಕೆ ಕಂಡಿವೆ.

ಕೆಲವು ನಿರ್ದಿಷ್ಟ ಷೇರುಗಳ ಗಳಿಕೆಯ ಜತೆಗೆ ಜಾಗತಿಕ ಷೇರುಪೇಟೆಗಳಲ್ಲಿ ನಡೆದ ಸಕಾರಾತ್ಮಕ ವಹಿವಾಟು ಸಹ ದೇಶಿ ಷೇರುಪೇಟೆಯ ಮೇಲೆ ಪ್ರಭಾವ ಬೀರಿತು ಎಂದು ವರ್ತಕರು ವಿಶ್ಲೇಷಣೆ ಮಾಡಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು