ಭಾನುವಾರ, ಸೆಪ್ಟೆಂಬರ್ 26, 2021
23 °C

15,400 ಅಂಶ ಮುಟ್ಟಿದ ನಿಫ್ಟಿ; ಗಳಿಕೆ ಕಂಡ ರಿಲಯನ್ಸ್‌, ಎಚ್‌ಡಿಎಫ್‌ಸಿ

ಪಿಟಿಐ Updated:

ಅಕ್ಷರ ಗಾತ್ರ : | |

ಷೇರುಪೇಟೆಯಲ್ಲಿ ಗೂಳಿ ಓಟ–ಪ್ರಾತಿನಿಧಿಕ ಚಿತ್ರ

ಮುಂಬೈ: ಈಕ್ವಿಟಿ ಸೂಚ್ಯಂಕ ಸೆನ್ಸೆಕ್ಸ್‌ ಶುಕ್ರವಾರ ಆರಂಭಿಕ ವಹಿವಾಟಿನಲ್ಲಿ 300 ಅಂಶ ಹೆಚ್ಚಳ ಕಂಡಿದೆ. ರಿಲಯನ್ಸ್‌ ಇಂಡಸ್ಟ್ರೀಸ್‌, ಎಚ್‌ಡಿಎಫ್‌ಸಿ ಹಾಗೂ ಐಸಿಐಸಿಐ ಬ್ಯಾಂಕ್‌ ಷೇರುಗಳ ಬೆಲೆ ಏರಿಕೆಯಾಗಿದೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 306.57 ಅಂಶ ಏರಿಕೆಯಾಗಿ 51,421.79 ಅಂಶಗಳನ್ನು ತಲುಪಿದೆ. ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ ನಿಫ್ಟಿ 101.15 ಅಂಶಗಳು ಹೆಚ್ಚಳವಾಗಿ 15,439 ಅಂಶಗಳಲ್ಲಿ ವಹಿವಾಟು ಮುಂದುವರಿದಿದೆ.

ರಿಲಯನ್ಸ್‌ ಇಂಡಸ್ಟ್ರೀಸ್‌ ಷೇರು ಶೇ 3ರಷ್ಟು ಗಳಿಕೆ ದಾಖಲಿಸಿದೆ. ಒಎನ್‌ಜಿಸಿ, ಎಸ್‌ಬಿಐ, ಇಂಡಸ್‌ಇಂಡ್‌ ಬ್ಯಾಂಕ್‌, ಎಚ್‌ಡಿಎಫ್‌ಸಿ, ಐಸಿಐಸಿಐ ಬ್ಯಾಂಕ್‌ ಷೇರುಗಳ ಬೆಲೆ ಹೆಚ್ಚಳವಾಗಿದೆ. ಸನ್‌ ಫರ್ಮಾ, ಡಾ.ರೆಡ್ಡೀಸ್‌, ಮಹೀಂದ್ರಾ ಆ್ಯಂಡ್‌ ಮಹೀಂದ್ರಾ, ಬಜಾಜ್‌ ಆಟೊ ಹಾಗೂ ನೆಸ್ಟ್ಲೆ ಇಂಡಿಯಾ ಷೇರುಗಳ ಬೆಲೆ ಇಳಿಮುಖವಾಗಿದೆ.

ಗುರುವಾರ ಸೆನ್ಸೆಕ್ಸ್‌ 97.70 ಅಂಶಗಳಷ್ಟು ಏರಿಕೆಯಾಗಿ 51,115.22 ಅಂಶ ಹಾಗೂ ನಿಫ್ಟಿ 36.40 ಅಂಶ ಹೆಚ್ಚಳವಾಗಿ 15,337.85 ಅಂಶಗಳಲ್ಲಿ ವಹಿವಾಟು ಮುಕ್ತಾಯವಾಗಿತ್ತು. ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಗುರುವಾರ ₹ 660.90 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ.

ಇದನ್ನೂ ಓದಿ–Covid-19 India Update: 44 ದಿನಗಳ ಅತಿ ಕಡಿಮೆ ಪ್ರಕರಣ ದಾಖಲು

ಜಗತ್ತಿನ ಬಹುತೇಕ ಷೇರುಪೇಟೆಗಳಲ್ಲಿ ಸಕಾರಾತ್ಮ ವಹಿವಾಟು ದಾಖಲಾಗಿರುವುದು ಹಾಗೂ ದೇಶದಲ್ಲಿ ಕೋವಿಡ್‌ ಪ್ರಕರಣಗಳು ಇಳಿಕೆಯಾಗುತ್ತಿರುವುದು ಹೂಡಿಕೆದಾರರಲ್ಲಿ ಖರೀದಿ ಉತ್ಸಾಹ ಹೆಚ್ಚಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು