ಶನಿವಾರ, ಫೆಬ್ರವರಿ 4, 2023
18 °C

ಮತ್ತೆ 60 ಸಾವಿರದ ಗಡಿ ದಾಟಿದ ಸೆನ್ಸೆಕ್ಸ್

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ ನಾಲ್ಕು ತಿಂಗಳ ನಂತರ ಮತ್ತೆ 60 ಸಾವಿರ ಅಂಶಗಳ ಗಡಿ ದಾಟಿದೆ. ಸತತ ನಾಲ್ಕನೆಯ ದಿನವೂ ಏರಿಕೆ ಕಂಡ ಸೆನ್ಸೆಕ್ಸ್ ಬುಧವಾರ 417 ಅಂಶ ಜಿಗಿದಿದೆ.

ಕಚ್ಚಾ ತೈಲದ ಬೆಲೆ ಇಳಿಕೆ ಆಗಿರುವುದು ಹಾಗೂ ವಿದೇಶಿ ಹೂಡಿಕೆ ಹರಿದು ಬರುತ್ತಿರುವುದು ಹೂಡಿಕೆದಾರರ ವಿಶ್ವಾಸ ಹೆಚ್ಚಲು ಕಾರಣವಾದವು ಎಂದು ತಜ್ಞರು ಹೇಳಿದ್ದಾರೆ. ರೂಪಾಯಿ ಮೌಲ್ಯ ವೃದ್ಧಿ ಮತ್ತು ಏಷ್ಯಾದ ಮಾರುಕಟ್ಟೆಗಳಲ್ಲಿನ ತೇಜಿ ವಹಿವಾಟು ಕೂಡ ಏರಿಕೆಗೆ ನೆರವಾದವು.

ಬುಧವಾರದ ಅಂತ್ಯಕ್ಕೆ ಸೆನ್ಸೆಕ್ಸ್ 60,260ಕ್ಕೆ ತಲುಪಿದೆ. ಏಪ್ರಿಲ್‌ 5ರ ನಂತರ ಸೆನ್ಸೆಕ್ಸ್ 60 ಸಾವಿರದ ಗಡಿ ದಾಟಿರುವುದು ಇದೇ ಮೊದಲು. ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ ನಿಫ್ಟಿ 119 ಅಂಶ ಏರಿಕೆಯಾಗಿದೆ.

‘ವಿದೇಶಿ ಸಾಂಸ್ಥಿಕ ಹೂಡಿಕೆದಾರರ ಪಾಲ್ಗೊಳ್ಳುವಿಕೆಯು ಈಗಿನ ಜಿಗಿತಕ್ಕೆ ಕಾರಣ. ಹಣದುಬ್ಬರ ಹೆಚ್ಚಳವು ಪಶ್ಚಿಮದ ಮಾರುಕಟ್ಟೆಗಳನ್ನು ಕಾಡುತ್ತಿದ್ದರೂ, ದೇಶಿ ಅರ್ಥ ವ್ಯವಸ್ಥೆಯು ಗಟ್ಟಿತನ ತೋರಿಸಿದೆ. ಇದು ವಿದೇಶಿ ಹೂಡಿಕೆ ಮತ್ತೆ ಬರುತ್ತಿರುವುದಕ್ಕೆ ಕಾರಣ’ ಎಂದು ಜಿಯೋಜಿತ್ ಫೈನಾನ್ಶಿಯಲ್‌ ಸರ್ವಿಸಸ್‌ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.

ಬಿಎಸ್‌ಇ ಮಿಡ್‌ಕ್ಯಾಪ್ ಸೂಚ್ಯಂಕ ಶೇ 0.64ರಷ್ಟು, ಸ್ಮಾಲ್‌ಕ್ಯಾಪ್ ಸೂಚ್ಯಂಕ ಶೇ 0.53ರಷ್ಟು ಏರಿಕೆ ಕಂಡಿವೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆಯು ಶೇ 0.13ರಷ್ಟು ಇಳಿಕೆಯಾಗಿ ಪ್ರತಿ ಬ್ಯಾರೆಲ್‌ಗೆ 92.22 ಅಮೆರಿಕನ್‌ ಡಾಲರ್‌ಗೆ ತಲುಪಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು