ಮಂಗಳವಾರ, ಏಪ್ರಿಲ್ 20, 2021
29 °C

ವಾಹನ, ಐ.ಟಿ. ಷೇರುಗಳ ಗಳಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ದೇಶದ ಷೇರುಪೇಟೆಗಳಲ್ಲಿ ಸತತ ಎರಡನೇ ದಿನವೂ ಸಕಾರಾತ್ಮಕ ವಹಿವಾಟು ನಡೆಯಿತು.

ವಾಹನ ಮತ್ತು ಐ.ಟಿ. ವಲಯದ ಷೇರುಗಳು ಉತ್ತಮ ಖರೀದಿ ವಹಿವಾಟಿಗೆ ಒಳಗಾಗಿದ್ದರಿಂದ ಮುಂಬೈ ಷೇರುಪೇಟೆಯು (ಬಿಎಸ್‌ಇ) 50 ಸಾವಿರದ ಗಡಿ ದಾಟಿತು.

ದಿನದ ವಹಿವಾಟಿನಲ್ಲಿ ಸೆನ್ಸೆಕ್ಸ್‌ 447 ಅಂಶಗಳಷ್ಟು ಏರಿಕೆ ಕಂಡು 50,296 ಅಂಶಗಳಿಗೆ ತಲುಪಿತು.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನೀಫ್ಟಿ 157 ಅಂಶ ಹೆಚ್ಚಾಗಿ 14,919 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿತು.

ಬಿಎಸ್‌ಇ ಸ್ಮಾಲ್‌, ಮಿಡ್‌ ಮತ್ತು ಲಾರ್ಜ್‌ ಕ್ಯಾಪ್‌ ಸೂಚ್ಯಂಕಗಳು ಕ್ರಮವಾಗಿ ಶೇ 1.60, ಶೇ 1.55 ಮತ್ತು ಶೇ 1.11ರಷ್ಟು ಏರಿಕೆ ಕಂಡಿವೆ.

ಮೂರನೇ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆಯು ಸಕಾರಾತ್ಮಕ ಹಾದಿಗೆ ಬಂದಿರುವುದು ಹೂಡಿಕೆ ಚಟುವಟಿಕೆಯ ಮೇಲೆ ಪ್ರಭಾವ ಬೀರಿದೆ ಎಂದು ವಿಶ್ಲೇಷಕರು ಹೇಳಿದ್ದಾರೆ.

ಫೆಬ್ರುವರಿಯಲ್ಲಿ ವಾಹನ ಮಾರಾಟ ಉತ್ತಮವಾಗಿರುವುದು ವಾಹನ ಕಂಪನಿಗಳ ಷೇರುಗಳಲ್ಲಿ ಖರೀದಿ ಭರಾಟೆ ಹೆಚ್ಚಿಸಿತು. ಸೂಚ್ಯಂಕದ ಏರಿಕೆಗೆ ಐ.ಟಿ. ಷೇರುಗಳ ಗಳಿಕೆಯು ಮುಖ್ಯ ಕಾರಣವಾಯಿತು ಎಂದು ಜಿಯೋಜಿತ್‌ ಫೈನಾನ್ಶಿಯಲ್‌ ಸರ್ವೀಸಸ್‌ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್‌ ಹೇಳಿದ್ದಾರೆ.

ರೂಪಾಯಿ ಮೌಲ್ಯ ವೃದ್ಧಿ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ 18 ಪೈಸೆ ಹೆಚ್ಚಾಗಿ ಒಂದು ಡಾಲರ್‌ಗೆ ₹ 73.37ರಂತೆ ವಿನಿಮಯಗೊಂಡಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು