ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಷೇರುಪೇಟೆಯಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟದ ವಹಿವಾಟು

Last Updated 25 ನವೆಂಬರ್ 2019, 19:44 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಅಮೆರಿಕ–ಚೀನಾ ವಾಣಿಜ್ಯ ಬಿಕ್ಕಟ್ಟು ಬಗೆಹರಿಯುವ ನಿಟ್ಟಿನಲ್ಲಿ ಸಕಾರಾತ್ಮಕ ಬೆಳವಣಿಗೆ ಕಂಡುಬಂದಿದೆ. ಇದರಿಂದಾಗಿ ದೇಶದ ಷೇರುಪೇಟೆಗಳಲ್ಲಿ ಸೋಮವಾರ ಸಾರ್ವಕಾಲಿಕ ಗರಿಷ್ಠ ಮಟ್ಟದ ವಹಿವಾಟು ನಡೆಯಿತು.

ಬಿಕ್ಕಟ್ಟು ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿಅಮೆರಿಕ ಮತ್ತು ಚೀನಾ ದೇಶಗಳು ವರ್ಷಾಂತ್ಯದ ವೇಳೆಗೆ ಪ್ರಾಥಮಿಕ ಒಪ್ಪಂದವೊಂದನ್ನು ಮಾಡಿಕೊಳ್ಳಲಿವೆ ಎನ್ನುವ ವರದಿ ಬಂದಿದೆ. ಇದು ಭಾರತವನ್ನೂ ಒಳಗೊಂಡು ಜಾಗತಿಕ ಷೇರುಪೇಟೆಗಳಲ್ಲಿ ಹೂಡಿಕೆ ಚಟುವಟಿಕೆಯನ್ನು ಹೆಚ್ಚಾಗುವಂತೆ ಮಾಡಿ, ಸೂಚ್ಯಂಕಗಳ ಏರಿಕೆಗೆ ಕಾರಣವಾಯಿತು.ದೂರಸಂಪರ್ಕ, ಲೋಹ ಮತ್ತು ವಾಹನ ವಲಯದ ಷೇರುಗಳು ಉತ್ತಮ ಖರೀದಿ ವಹಿವಾಟಿಗೆ ಒಳಗಾದವು.

ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕ 530 ಅಂಶ ಜಿಗಿತ ಕಂಡು 40,889 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ. ಮಧ್ಯಂತರ ವಹಿವಾಟಿನಲ್ಲಿ 40,932 ಅಂಶಗಳ ಗರಿಷ್ಠ ಮಟ್ಟಕ್ಕೂ ಏರಿಕೆಯಾಗಿತ್ತು.

ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸೂಚ್ಯಂಕ ನಿಫ್ಟಿ 159 ಅಂಶ ಹೆಚ್ಚಾಗಿ 12,074 ಅಂಶಗಳ ಗರಿಷ್ಠ ಮಟ್ಟದಲ್ಲಿ ವಹಿವಾಟು ಅಂತ್ಯಗೊಂಡಿದೆ.

ಗರಿಷ್ಠ ಗಳಿಕೆ: ಭಾರ್ತಿ ಏರ್‌ಟೆಲ್‌ ಷೇರುಗಳು ಶೇ 7.20ರಷ್ಟು ಗರಿಷ್ಠ ಗಳಿಕೆ ಕಂಡುಕೊಂಡಿವೆ. ಟಾಟಾ ಸ್ಟೀಲ್‌ ಶೇ 4.99, ಇಂಡಸ್‌ಇಂಡ್‌ ಬ್ಯಾಂಕ್‌ ಶೇ 3.49, ಆ್ಯಕ್ಸಿಸ್ ಬ್ಯಾಂಕ್‌ ಶೇ 3.26 ಮತ್ತು ಎಚ್‌ಡಿಎಫ್‌ಸಿ ಶೇ 2.57ರಷ್ಟು ಗಳಿಕೆ ಕಂಡಿವೆ.

ನಷ್ಟ: ಒಎನ್‌ಜಿಸಿ ಶೇ 2.17ರಷ್ಟು ಮತ್ತು ಯೆಸ್ ಬ್ಯಾಂಕ್‌ ಶೇ 1.70ರಷ್ಟು ಇಳಿಕೆ ಕಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT