ಶುಕ್ರವಾರ, ಫೆಬ್ರವರಿ 28, 2020
19 °C

ಷೇರುಪೇಟೆಯಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟದ ವಹಿವಾಟು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಂಬೈ (ಪಿಟಿಐ): ಅಮೆರಿಕ–ಚೀನಾ ವಾಣಿಜ್ಯ ಬಿಕ್ಕಟ್ಟು ಬಗೆಹರಿಯುವ ನಿಟ್ಟಿನಲ್ಲಿ ಸಕಾರಾತ್ಮಕ ಬೆಳವಣಿಗೆ ಕಂಡುಬಂದಿದೆ. ಇದರಿಂದಾಗಿ ದೇಶದ ಷೇರುಪೇಟೆಗಳಲ್ಲಿ ಸೋಮವಾರ ಸಾರ್ವಕಾಲಿಕ ಗರಿಷ್ಠ ಮಟ್ಟದ ವಹಿವಾಟು ನಡೆಯಿತು.

ಬಿಕ್ಕಟ್ಟು ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಅಮೆರಿಕ ಮತ್ತು ಚೀನಾ ದೇಶಗಳು ವರ್ಷಾಂತ್ಯದ ವೇಳೆಗೆ ಪ್ರಾಥಮಿಕ ಒಪ್ಪಂದವೊಂದನ್ನು ಮಾಡಿಕೊಳ್ಳಲಿವೆ ಎನ್ನುವ ವರದಿ ಬಂದಿದೆ. ಇದು ಭಾರತವನ್ನೂ ಒಳಗೊಂಡು ಜಾಗತಿಕ ಷೇರುಪೇಟೆಗಳಲ್ಲಿ ಹೂಡಿಕೆ ಚಟುವಟಿಕೆಯನ್ನು ಹೆಚ್ಚಾಗುವಂತೆ ಮಾಡಿ, ಸೂಚ್ಯಂಕಗಳ ಏರಿಕೆಗೆ ಕಾರಣವಾಯಿತು. ದೂರಸಂಪರ್ಕ, ಲೋಹ ಮತ್ತು ವಾಹನ ವಲಯದ ಷೇರುಗಳು ಉತ್ತಮ ಖರೀದಿ ವಹಿವಾಟಿಗೆ ಒಳಗಾದವು.

ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕ 530 ಅಂಶ ಜಿಗಿತ ಕಂಡು 40,889 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ. ಮಧ್ಯಂತರ ವಹಿವಾಟಿನಲ್ಲಿ 40,932 ಅಂಶಗಳ ಗರಿಷ್ಠ ಮಟ್ಟಕ್ಕೂ ಏರಿಕೆಯಾಗಿತ್ತು. 

ಹೂಡಿಕೆದಾರರ ಸಂಪತ್ತು ವೃದ್ಧಿ: ದಿನದ ವಹಿವಾಟಿನಲ್ಲಿ ಹೂಡಿಕೆದಾರರ ಸಂಪತ್ತಿನಲ್ಲಿ ₹1.81 ಲಕ್ಷ ಕೋಟಿ ಏರಿಕೆಯಾಗಿದೆ. ಷೇರುಪೇಟೆಯ ಬಂಡವಾಳ ಮೌಲ್ಯ ₹154.55 ಲಕ್ಷ ಕೋಟಿಗೆ ತಲುಪಿದೆ.

ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸೂಚ್ಯಂಕ ನಿಫ್ಟಿ 159 ಅಂಶ ಹೆಚ್ಚಾಗಿ 12,074 ಅಂಶಗಳ ಗರಿಷ್ಠ ಮಟ್ಟದಲ್ಲಿ ವಹಿವಾಟು ಅಂತ್ಯಗೊಂಡಿದೆ.

ಗರಿಷ್ಠ ಗಳಿಕೆ: ಭಾರ್ತಿ ಏರ್‌ಟೆಲ್‌ ಷೇರುಗಳು ಶೇ 7.20ರಷ್ಟು ಗರಿಷ್ಠ ಗಳಿಕೆ ಕಂಡುಕೊಂಡಿವೆ. ಟಾಟಾ ಸ್ಟೀಲ್‌ ಶೇ 4.99, ಇಂಡಸ್‌ಇಂಡ್‌ ಬ್ಯಾಂಕ್‌ ಶೇ 3.49, ಆ್ಯಕ್ಸಿಸ್ ಬ್ಯಾಂಕ್‌ ಶೇ 3.26 ಮತ್ತು ಎಚ್‌ಡಿಎಫ್‌ಸಿ ಶೇ 2.57ರಷ್ಟು ಗಳಿಕೆ ಕಂಡಿವೆ.

ನಷ್ಟ: ಒಎನ್‌ಜಿಸಿ ಶೇ 2.17ರಷ್ಟು ಮತ್ತು ಯೆಸ್ ಬ್ಯಾಂಕ್‌ ಶೇ 1.70ರಷ್ಟು ಇಳಿಕೆ ಕಂಡಿವೆ.

ರೂಪಾಯಿ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್‌ ಎದುರು ರೂಪಾಯಿ ಮೌಲ್ಯ 3 ಪೈಸೆ ಇಳಿಕೆಯಾಗಿ ಒಂದು ಡಾಲರ್‌ಗೆ ₹71.74ರಂತೆ ವಿನಿಮಯಗೊಂಡಿತು.

ಬ್ರೆಂಟ್ ಕಚ್ಚಾ ತೈಲ ದರ ಸೇ 0.02ರಷ್ಟು ಹೆಚ್ಚಾಗಿ ಒಂದು ಬ್ಯಾರೆಲ್‌ಗೆ 63.40 ಡಾಲರ್‌ಗಳಿಗೆ ತಲುಪಿದೆ.

ಸಕಾರಾತ್ಮಕ ಅಂಶಗಳು

* ವಿದೇಶಿ ಬಂಡವಾಳ ಒಳಹರಿವು

* ವಾಹನ, ಗ್ರಾಹಕ ಬಳಕೆ ವಸ್ತುಗಳ ವಲಯದ ಚೇತರಿಕೆ

* ಕೇಂದ್ರೋದ್ಯಮಗಳ ಷೇರು ವಿಕ್ರಯದ ನಿರ್ಧಾರ

* ಆರ್‌ಬಿಐನಿಂದ ಬಡ್ಡಿದರ ಕಡಿತದ ನಿರೀಕ್ಷೆ

* ಅಮೆರಿಕದ ಫೆಡರಲ್‌ ರಿಸರ್ವ್‌, ಯುರೋಪ್‌ನ ಕೇಂದ್ರೀಯ ಬ್ಯಾಂಕ್‌ಗಳಿಂದ ಬಡ್ಡಿದರ ಕಡಿತ

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು