ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆನ್ಸೆಕ್ಸ್‌ 375 ಅಂಶ ಏರಿಕೆ

Last Updated 22 ಏಪ್ರಿಲ್ 2021, 14:07 IST
ಅಕ್ಷರ ಗಾತ್ರ

ಮುಂಬೈ: ಎರಡು ದಿನಗಳಿಂದ ಇಳಿಮುಖವಾಗಿದ್ದ ಷೇರುಪೇಟೆಗಳಲ್ಲಿನ ವಹಿವಾಟು ಗುರುವಾರ ಚೇತರಿಕೆಯ ಹಾದಿಗೆ ಮರಳಿತು. ಬ್ಯಾಂಕ್‌, ಹಣಕಾಸು ವಲಯದ ಷೇರುಗಳ ಬೆಲೆ ಏರಿಕೆಯು ಸಕಾರಾತ್ಮಕ ವಹಿವಾಟಿಗೆ ಕಾರಣವಾಯಿತು.

ವಹಿವಾಟಿನ ಆರಂಭದಲ್ಲಿಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 501 ಅಂಶ ಇಳಿಕೆ ಕಂಡಿತ್ತು. ವಹಿವಾಟಿನ ಅಂತ್ಯದ ವೇಳೆಗೆ 375 ಅಂಶಗಳ ಏರಿಕೆಯೊಂದಿಗೆ 48,081 ಅಂಶಗಳಿಗೆ ತಲುಪಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 110 ಅಂಶ ಏರಿಕೆಯಾಗಿ 14,406 ಅಂಶಗಳಿಗೆ ತಲುಪಿತು.

ದಿನದ ವಹಿವಾಟಿನಲ್ಲಿ ಐಸಿಐಸಿಐ ಬ್ಯಾಂಕ್ ಷೇರು ಶೇಕಡ 3.60ರಷ್ಟು ಏರಿಕೆ ಕಂಡಿತು. ಎಚ್‌ಡಿಎಫ್‌ಸಿ, ಬಜಾಜ್‌ ಆಟೊ, ಎಚ್‌ಡಿಎಫ್‌ಸಿ ಬ್ಯಾಂಕ್‌, ಎಸ್‌ಬಿಐ, ಕೋಟಕ್‌ ಬ್ಯಾಂಕ್‌, ಬಜಾಜ್‌ ಫೈನಾನ್ಸ್‌ ಮತ್ತು ಎಕ್ಸಿಸ್ ಬ್ಯಾಂಕ್‌ ಷೇರುಗಳ ಬೆಲೆಯಲ್ಲಿಯೂ ಏರಿಕೆ ಆಗಿದೆ.

ಕೋವಿಡ್‌–19 ಪ್ರಕರಣಗಳ ಸಂಖ್ಯೆ ಇಳಿಮುಖ ಆಗುವವರೆಗೂ ಷೇರುಪೇಟೆಯಲ್ಲಿ ಚಂಚಲತೆ ಮುಂದುವರಿಯುವ ನಿರೀಕ್ಷೆ ಇದೆ ಎಂದು ರಿಲಯನ್ಸ್‌ ಸೆಕ್ಯುರಿಟೀಸ್‌ನ ಯೋಜನಾ ಮುಖ್ಯಸ್ಥ ವಿನೋದ್‌ ಮೋದಿ ಹೇಳಿದ್ದಾರೆ.

ರೂಪಾಯಿ ಮೌಲ್ಯ ಇಳಿಕೆ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ 6 ಪೈಸೆ ಇಳಿಕೆ ಕಂಡು ಒಂದು ಡಾಲರ್‌ಗೆ ₹ 74.94ರಂತೆ ವಿನಿಮಯಗೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT