ಬುಧವಾರ, ಜೂನ್ 16, 2021
28 °C

983 ಅಂಶ ಕುಸಿದ ಸೆನ್ಸೆಕ್ಸ್

ಪಿಟಿಐ Updated:

ಅಕ್ಷರ ಗಾತ್ರ : | |

pti file

ಮುಂಬೈ: ನಾಲ್ಕು ದಿನಗಳ ಏರಿಕೆಯ ಹಾದಿಯಿಂದ ಹೊರಳಿದ ದೇಶಿ ಷೇರುಪೇಟೆಗಳು, ಶುಕ್ರವಾರ ಕುಸಿತ ದಾಖಲಿಸಿದವು. ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 983 ಅಂಶ, ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ ನಿಫ್ಟಿ 263 ಅಂಶ ಇಳಿಕೆ ಕಂಡವು.

ಎಚ್‌ಡಿಎಫ್‌ಸಿ ಬ್ಯಾಂಕ್‌, ಎಚ್‌ಡಿಎಫ್‌ಸಿ, ಐಸಿಐಸಿಐ ಬ್ಯಾಂಕ್, ಕೋಟಕ್ ಬ್ಯಾಂಕ್, ಏಷ್ಯನ್ ಪೇಂಟ್ಸ್‌, ಮಹೀಂದ್ರ ಆ್ಯಂಡ್ ಮಹೀಂದ್ರ, ಟಿಸಿಎಸ್, ಎಚ್‌ಯುಎಲ್‌ ಮತ್ತು ಮಾರುತಿ ಷೇರುಗಳು ಇಳಿಕೆ ಕಂಡವು.

ಒಎನ್‌ಜಿಸಿ, ಸನ್ ಫಾರ್ಮಾ, ಡಾ ರೆಡ್ಡೀಸ್ ಮತ್ತು ಬಜಾಜ್ ಆಟೊ ಷೇರುಗಳು ಮೌಲ್ಯ ಹೆಚ್ಚಿಸಿಕೊಂಡವು. ‘ಹಣಕಾಸು ವಲಯದ ಷೇರುಗಳ ಮಾರಾಟ ಜೋರಾಗಿ ನಡೆಯಿತು. ಹಾಗೆಯೇ ಜಾಗತಿಕ ಮಟ್ಟದಲ್ಲಿ ನಕಾರಾತ್ಮಕ ವಹಿವಾಟು ನಡೆಯಿತು. ಇದರಿಂದಾಗಿ ದೇಶಿ ಸೂಚ್ಯಂಕಗಳು ಇಳಿಕೆಯ ಹಾದಿ ಹಿಡಿದವು’ ಎಂದು ರಿಲಯನ್ಸ್ ಸೆಕ್ಯುರಿಟೀಸ್‌ನ ಬಿನೋದ್ ಮೋದಿ ಹೇಳಿದರು.

ಕೋವಿಡ್–19 ಪ್ರಕರಣಗಳ ಸಂಖ್ಯೆ ಕಡಿಮೆ ಆಗುತ್ತಿಲ್ಲ. ಕೋವಿಡ್‌ನಿಂದಾಗಿ ಜನ ದೊಡ್ಡ ಸಂಖ್ಯೆಯಲ್ಲಿ ಸಾವನ್ನಪ್ಪುತ್ತಿದ್ದಾರೆ. ಈ ಎರಡು ಸಂಗತಿಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಳವಳಕ್ಕೆ ಕಾರಣವಾಗಿವೆ. ಆರ್ಥಿಕ ಚಟುವಟಿಕೆಗಳ ಮೇಲೆ ಯಾವುದೇ ಸಂದರ್ಭದಲ್ಲಿ ಇನ್ನಷ್ಟು ನಿರ್ಬಂಧಗಳು ಜಾರಿಗೆ ಬರುವ ಸಾಧ್ಯತೆ ಇದೆ. ಕೋವಿಡ್–19 ಪ್ರಕರಣಗಳು ಕಡಿಮೆ ಆಗುವವರೆಗೂ ಮಾರುಕಟ್ಟೆಯಲ್ಲಿ ಅನಿಶ್ಚಿತ ಸ್ಥಿತಿ ಮುಂದುವರಿಯಲಿದೆ ಎಂದು ಮೋದಿ ವಿವರಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು