ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐ.ಟಿ, ಹಣಕಾಸು ಕಂಪನಿಗಳ ಷೇರು ಗಳಿಕೆ: ಸೂಚ್ಯಂಕ ಏರಿಕೆ

Last Updated 20 ಜುಲೈ 2020, 15:18 IST
ಅಕ್ಷರ ಗಾತ್ರ

ಮುಂಬೈ: ಐ.ಟಿ. ಮತ್ತು ಹಣಕಾಸು ವಲಯದ ಕಂಪನಿಗಳ ಷೇರು ಮೌಲ್ಯ ಹೆಚ್ಚಾಗಿದ್ದರಿಂದ ದೇಶದ ಷೇರುಪೇಟೆಗಳ ಸೂಚ್ಯಂಕಗಳು ಸೋಮವಾರ ಏರಿಕೆ ಕಂಡವು.

ಷೇರುಪೇಟೆಗಳಲ್ಲಿ ವಹಿವಾಟು ಸಕಾರಾತ್ಮಕವಾಗಿಯೇ ಆರಂಭವಾಯಿತು. ಬಜಾಜ್‌ ಫೈನಾನ್ಸ್‌‌, ಬಜಾಜ್‌ ಫಿನ್‌ಸರ್ವ್‌, ಎಚ್‌ಸಿಎಲ್‌ ಟೆಕ್‌, ಟೆಕ್‌ ಮಹೀಂದ್ರ, ಇನ್ಫೊಸಿಸ್‌, ಎಚ್‌ಡಿಎಫ್‌ಸಿ ಬ್ಯಾಂಕ್‌ ಮತ್ತು ಐಸಿಐಸಿಐ ಬ್ಯಾಂಕ್‌ ಷೇರುಗಳ ಮೌಲ್ಯ ಹೆಚ್ಚಾಯಿತು. ಹೀಗಾಗಿ, ಕೋವಿಡ್‌–19 ಪ್ರಕರಣಗಳು ಹೆಚ್ಚುತ್ತಲೇ ಇದ್ದರೂ ಅದರ ಪ್ರಭಾವಕ್ಕೆ ಒಳಗಾಗದೆ ಷೇರುಪೇಟೆಗಳಲ್ಲಿ ಉತ್ತಮ ವಹಿವಾಟು ನಡೆಯಿತು ಎಂದು ತಜ್ಞರು ವಿಶ್ಲೇಷಣೆ ಮಾಡಿದ್ದಾರೆ.

ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕ 399 ಅಂಶ ಹೆಚ್ಚಳ ಕಂಡು 37,419 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ. ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸೂಚ್ಯಂಕ ನಿಫ್ಟಿ 121 ಅಂಶ ಹೆಚ್ಚಳ ಆಗಿ 11,022 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ. ಆದರೆ, ಕೋವಿಡ್–19‌ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಏಷ್ಯಾದ ಷೇರುಪೇಟೆಗಳು ಇಳಿಮುಖವಾದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT