ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರು ದಿನಗಳ ಬಳಿಕ ಷೇರುಪೇಟೆ ವಹಿವಾಟು ಚೇತರಿಕೆ

ಕರಡಿ ಹಿಡಿತದಿಂದ ಹೊರಬಂದ ಗೂಳಿ
Last Updated 9 ಅಕ್ಟೋಬರ್ 2019, 11:02 IST
ಅಕ್ಷರ ಗಾತ್ರ

ಮುಂಬೈ: ದೇಶದ ಷೇರುಪೇಟೆಗಳು ಆರು ದಿನಗಳ ಬಳಿಕ ಚೇತರಿಕೆ ಹಾದಿಗೆ ಮರಳಿವೆ. ಬುಧವಾರದ ವಹಿವಾಟಿನಲ್ಲಿ ಕರಡಿ ಹಿಡಿತದಿಂದ ಹೊರಬಂದು ಗೂಳಿ ಉತ್ಸಾಹದಿಂದ ಓಡಿತು. ಇದರಿಂದ ಸಕಾರಾತ್ಮಕ ಮಟ್ಟದಲ್ಲಿ ದಿನದ ವಹಿವಾಟು ಅಂತ್ಯಗೊಂಡಿದೆ.

ಬ್ಯಾಂಕಿಂಗ್ ಮತ್ತು ಹಣಕಾಸು ವಲಯದ ಷೇರುಗಳು ಉತ್ತಮ ಗಳಿಕೆ ಕಂಡುಕೊಂಡಿದ್ದರಿಂದ ಸೂಚ್ಯಂಕಗಳು ಏರಿಕೆ ಕಂಡುಕೊಂಡಿವೆ ಎಂದು ತಜ್ಞರು ವಿಶ್ಲೇಷಣೆ ಮಾಡಿದ್ದಾರೆ.

ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕ 646 ಅಂಶಗಳಷ್ಟು ಜಿಗಿತ ಕಂಡು 38,178 ಅಂಶಗಳಿಗೆ ತಲುಪಿತು.ದಿನದ ವಹಿವಾಟಿನಲ್ಲಿ, ಮಾರುಕಟ್ಟೆ ಮೌಲ್ಯದ ಲೆಕ್ಕದಲ್ಲಿ ಹೂಡಿಕೆದಾರರ ಸಂಪತ್ತು ₹ 1.66 ಲಕ್ಷ ಕೋಟಿಗಳಷ್ಟು ಏರಿಕೆಯಾಗಿದೆ. ಇದರಿಂದ ಷೇರುಪೇಟೆಯ ಬಂಡವಾಳ ಮೌಲ್ಯ ₹ 142.26 ಲಕ್ಷ ಕೋಟಿಗಳಿಂದ ₹ 143.92 ಲಕ್ಷ ಕೋಟಿಗಳಿಗೆ ಏರಿಕೆಯಾಗಿದೆ.

ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸೂಚ್ಯಂಕ ನಿಫ್ಟಿ 11,300 ಅಂಶಗಳಲ್ಲಿ ವಹಿವಾಟು ಅಂತ್ಯಗೊಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT