ಮಂಗಳವಾರ, ಸೆಪ್ಟೆಂಬರ್ 28, 2021
21 °C

ಗರಿಷ್ಠ ಮಟ್ಟದಲ್ಲಿ ಸೆನ್ಸೆಕ್ಸ್: ಬ್ಯಾಂಕ್‌, ಲೋಹ ವಲಯದ ಷೇರುಗಳ ಗಳಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ ಷೇರುಪೇಟೆ–ಸಾಂದರ್ಭಿಕ ಚಿತ್ರ

ಮುಂಬೈ: ಬ್ಯಾಂಕ್‌ ಮತ್ತು ಲೋಹ ವಲಯದ ಷೇರುಗಳ ಮೌಲ್ಯವರ್ಧನೆಯು ಮುಂಬೈ ಷೇರುಪೇಟೆಯಲ್ಲಿ ಸಕಾರಾತ್ಮಕ ವಹಿವಾಟು ನಡೆಯಲು ನೆರವಾಯಿತು. ಇದರಿಂದಾಗಿ ಬಿಎಸ್‌ಇ ಸೆನ್ಸೆಕ್ಸ್‌ ಶುಕ್ರವಾರದ ವಹಿವಾಟಿನ ಕೊನೆಯಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿತು.

226 ಅಂಶ ಏರಿಕೆ ಕಂಡ ಸೆನ್ಸೆಕ್ಸ್ 52,925 ಅಂಶಗಳಲ್ಲಿ ವಹಿವಾಟು ಕೊನೆಗೊಳಿಸಿತು. ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ ನಿಫ್ಟಿ 69 ಅಂಶ ಏರಿಕೆ ಕಂಡಿತು.

‘ಕೋವಿಡ್‌ನ ಮೂರನೆಯ ಅಲೆಯ ಅಪ್ಪಳಿಸುವ ಸಾಧ್ಯತೆಯು ಮಾರುಕಟ್ಟೆಯ ಮೇಲೆ ಕೆಟ್ಟ ಪರಿಣಾಮ ಉಂಟುಮಾಡಬಹುದು’ ಎಂದು ರೆಲಿಗೇರ್‌ ಬ್ರೋಕಿಂಗ್‌ ಕಂಪನಿಯ ಸಂಶೋಧನಾ ವಿಭಾಗದ ಉಪಾಧ್ಯಕ್ಷ ಅಜಿತ್ ಮಿಶ್ರಾ ಹೇಳಿದ್ದಾರೆ.

ಶುಕ್ರವಾರದ ವಹಿವಾಟಿನಲ್ಲಿ ರೂಪಾಯಿ ಮೌಲ್ಯವು ಅಮೆರಿಕದ ಡಾಲರ್ ಎದುರು 2 ಪೈಸೆಯಷ್ಟು ಇಳಿಕೆ ಆಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು