ಮಂಗಳವಾರ, ಅಕ್ಟೋಬರ್ 22, 2019
21 °C
ಇಂಧನ, ವಾಹನ, ಬ್ಯಾಂಕ್‌ ಷೇರುಗಳ ಉತ್ತಮ ಗಳಿಕೆ

ಮುಂಗಾರು ಚೇತರಿಕೆ, ಸೂಚ್ಯಂಕ ಏರಿಕೆ

Published:
Updated:

ಮುಂಬೈ (ಪಿಟಿಐ): ಮುಂಗಾರು ತುಸು ಚೇತರಿಕೆ ಕಂಡಿರುವುದರಿಂದ  ಹೂಡಿಕೆ ಚಟುವಟಿಕೆ ಹೆಚ್ಚಾಗಿದೆ. ಇದರಿಂದ ಷೇರುಪೇಟೆಗಳಲ್ಲಿ ಮಂಗಳವಾರ ಸಕಾರಾತ್ಮಕ ಚಟುವಟಿಕೆ ನಡೆಯಿತು.

ಜಾಗತಿಕ ವಾಣಿಜ್ಯ ಸಂಘರ್ಷ ಮತ್ತು ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆಯನ್ನೂ ಮೀರಿ ಮುಂಗಾರಿನ ಕಡೆಗೆ ವಹಿವಾಟುದಾರರು ಹೆಚ್ಚಿನ ಗಮನ ನೀಡಿದ್ದಾರೆ ಎಂದು ತಜ್ಞರು ಹೇಳಿದ್ದಾರೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) 313 ಅಂಶ ಚೇತರಿಕೆ ಕಂಡು 39,435 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿತು.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 97 ಅಂಶ ಹೆಚ್ಚಾಗಿ 11,796 ಅಂಶಗಳಲ್ಲಿ ವಹಿವಾಟು ಅಂತ್ಯ
ಗೊಂಡಿದೆ. ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ ಷೇರುಗಳು ಶೇ 2.63ರಷ್ಟು ಅತಿ ಹೆಚ್ಚಿನ ಗಳಿಕೆ ಕಂಡಿವೆ.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)