ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೂಡಿಕೆದಾರ ಸಂಪತ್ತು ₹3.56 ಲಕ್ಷ ಕೋಟಿ ವೃದ್ಧಿ

Last Updated 8 ಆಗಸ್ಟ್ 2020, 19:58 IST
ಅಕ್ಷರ ಗಾತ್ರ

ಮುಂಬೈ: ದೇಶದ ಷೇರುಪೇಟೆಗಳ ವಾರದ ವಹಿವಾಟು ಸಕಾರಾತ್ಮಕವಾಗಿ ಅಂತ್ಯಗೊಂಡಿದೆ.

ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕ ವಾರದ ವಹಿವಾಟಿನಲ್ಲಿ 434 ಅಂಶ ಹೆಚ್ಚಾಗಿ 38,040 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ. ಹೂಡಿಕೆದಾರರ ಸಂಪತ್ತು ಮೌಲ್ಯ ₹ 3.56 ಲಕ್ಷ ಕೋಟಿಗಳಷ್ಟು ಹೆಚ್ಚಾಗಿದೆ. ಇದರಿಂದ ಷೇರುಪೇಟೆಯ ಬಂಡವಾಳ ಮೌಲ್ಯ ₹150.95 ಲಕ್ಷ ಕೋಟಿಗೆ ಏರಿಕೆಯಾಗಿದೆ.

ಲಾಭ ಗಳಿಕೆ ಮತ್ತು ಮಾರಾಟದ ಒತ್ತಡದಿಂದಾಗಿ ಸೋಮವಾರ ಮತ್ತು ಮಂಗಳವಾರದ ವಹಿವಾಟಿನಲ್ಲಿ ಸೂಚ್ಯಂಕ ಇಳಿಕೆ ಕಂಡಿತ್ತು. ಬುಧವಾರ, ಗುರುವಾರ ಮತ್ತು ಶುಕ್ರವಾರ ಸಕಾರಾತ್ಮಕ್ಕೆ ಮಟ್ಟದಲ್ಲಿ ವಹಿವಾಟು ಅಂತ್ಯಗೊಂಡಿತು.

ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸೂಚ್ಯಂಕ ನಿಫ್ಟಿ 141 ಅಂಶ ಹೆಚ್ಚಾಗಿ 11,214 ಅಂಶಗಳಲ್ಲಿ ವಾರದ ವಹಿವಾಟು ಅಂತ್ಯಕಂಡಿದೆ.

ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದು, ಜುಲೈ ತಿಂಗಳ ತಯಾರಿಕಾ ಚಟುವಟಿಕೆ ಚೇತರಿಕೆ ಕಾಣದಿರುವುದು ಸೂಚ್ಯಂಕದ ಇಳಿಕೆಗೆ ಕಾರಣವಾದವು. ಆರ್‌ಬಿಐನಿಂದ ಹೊಂದಾಣಿಕೆ ನೀತಿ, ವಿದೇಶಿ ಬಂಡವಾಳ ಒಳಹರಿವು ಸೂಚ್ಯಂಕದ ಏರಿಕೆಗೆ ಕಾರಣವಾಗಿವೆ.

ವಿದೇಶಿ ವಿನಿಮಯ ಸಂಗ್ರಹ: ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹವು ಪ್ರಸಕ್ತ ಹಣಕಾಸು ವರ್ಷದಲ್ಲಿ ಜೂನ್‌ 31ರವರೆಗೆ ₹ 4.26 ಲಕ್ಷ ಕೋಟಿಗಳಷ್ಟಾಗಿದೆ. ಶುಕ್ರವಾರದ ಅಂತ್ಯಕ್ಕೆ ಮೀಸಲು ಸಂಗ್ರಹ ಸಾರ್ವಕಾಲಿಕ ಗರಿಷ್ಠ ಮಟ್ಟವಾದ ₹ 40.05 ಲಕ್ಷ ಕೋಟಿಗಳಿಗೆ ತಲುಪಿದೆ.

ವಿದೇಶಿ ಕರೆನ್ಸಿಗಳ ಸಂಗ್ರಹದಲ್ಲಿ ಏರಿಕೆ ಆಗುತ್ತಿರುವುದರಿಂದ ದೇಶದ ಒಟ್ಟಾರೆ ಮೀಸಲು ಸಂಗ್ರಹವೂ ಹೆಚ್ಚಾಗುತ್ತಿದೆ. ಸದ್ಯ, ವಿದೇಶಿ ಕರೆನ್ಸಿಗಳ ಸಂಗ್ರಹ ₹ 36.81 ಲಕ್ಷ ಕೋಟಿಗಳಷ್ಟಾಗಿದೆ ಎಂದು ಆರ್‌ಬಿಐ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT