ಭಾನುವಾರ, ಅಕ್ಟೋಬರ್ 25, 2020
28 °C

ಸೂಚ್ಯಂಕ 629 ಅಂಶ ಹೆಚ್ಚಳ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಜಿಎಸ್‌ಟಿ ಸಂಗ್ರಹದಲ್ಲಿ ಆಗಿರುವ ಹೆಚ್ಚಳ ಮತ್ತು ತಯಾರಿಕಾ ವಲಯದಲ್ಲಿ ಕಂಡುಬಂದಿರುವ ಚೇತರಿಕೆಯಿಂದಾಗಿ ದೇಶದ ಷೇರುಪೇಟೆಗಳಲ್ಲಿ ಗುರುವಾರ ಸಕಾರಾತ್ಮಕ ವಹಿವಾಟು ನಡೆಯಿತು.

ಡಾಲರ್‌ ಎದುರು ರೂಪಾಯಿ ಮೌಲ್ಯ 65 ಪೈಸೆ ಹೆಚ್ಚಾಗಿರುವುದು ಹಾಗೂ ಕೇಂದ್ರ ಸರ್ಕಾರವು ‘ಅನ್‌ಲಾಕ್‌ 5’ ಮಾರ್ಗಸೂಚಿ ನೀಡಿರುವುದು ಸಹ ಷೇರುಪೇಟೆಯ ವಹಿವಾಟು ಸಕಾರಾತ್ಮಕವಾಗಿ ನಡೆಯಲು ಕಾರಣವಾಗಿದೆ ಎಂದು ವರ್ತಕರು ಹೇಳಿದ್ದಾರೆ.

ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕ 630 ಅಂಶ ಹೆಚ್ಚಾಗಿ 38,697 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ. ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸೂಚ್ಯಂಕ ನಿಫ್ಟಿ 170 ಅಂಶ ಹೆಚ್ಚಾಗಿ 11,417 ಅಂಶಗಳಿಗೆ ತಲುಪಿತು.

ಬಿಎಸ್‌ಇನಲ್ಲಿ ಇಂಡಸ್‌ಇಂಡ್‌ ಬ್ಯಾಂಕ್‌ ಷೇರು ಮೌಲ್ಯ ಶೇ 12.41ರಷ್ಟು ಹೆಚ್ಚಾಗಿದೆ. ಬಜಾಜ್‌ ಫೈನಾನ್ಸ್‌, ಆ್ಯಕ್ಸಿಸ್‌ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌, ಟೆಕ್‌ ಮಹೀಂದ್ರಾ, ಬಜಾಜ್ ಆಟೊ, ಬಜಾಜ್‌ ಫೈನಾನ್ಸ್‌ ಮತ್ತು ಕೋಟಕ್‌ ಬ್ಯಾಂಕ್‌ ಷೇರುಗಳ ಮೌಲ್ಯವೂ ಹೆಚ್ಚಾಗಿದೆ. ಬಿಎಸ್‌ಇ ಮಧ್ಯಮ ಮತ್ತು ಸಣ್ಣ ಶ್ರೇಣಿ ಸೂಚ್ಯಂಕಗಳು ಶೇ 0.73ರಷ್ಟು ಏರಿಕೆ ಕಂಡುಕೊಂಡಿವೆ.

ಗಾಂಧಿ ಜಯಂತಿ ಪ್ರಯುಕ್ತ ಶುಕ್ರವಾರ ಷೇರುಪೇಟೆ ವಹಿವಾಟಿಗೆ ರಜೆ ಇರಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು