ಗುರುವಾರ , ಆಗಸ್ಟ್ 5, 2021
24 °C

ಜಾಗತಿಕ ಷೇರುಪೇಟೆಗಳ ಪ್ರಭಾವ: ಸೂಚ್ಯಂಕ 377 ಅಂಶ ಹೆಚ್ಚಳ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಜಾಗತಿಕ ಷೇರುಪೇಟೆಗಳ ಸಕಾರಾತ್ಮಕ ವಹಿವಾಟು ಹಾಗೂ ಎಚ್‌ಡಿಎಫ್‌ಸಿ, ಐಸಿಐಸಿಐ ಬ್ಯಾಂಕ್‌ ಮತ್ತು ಇನ್ಫೊಸಿಸ್ ಷೇರುಗಳ ಉತ್ತಮ ಗಳಿಕೆಯು ಮಂಗಳವಾರ ದೇಶಿ ಷೇರುಪೇಟೆಗಳಲ್ಲಿ ಉತ್ಸಾಹ ಮೂಡಿಸಿದವು.

ಭಾರತ–ಚೀನಾ ಗಡಿ ಭಾಗದಲ್ಲಿನ ಉದ್ವಿಗ್ನ ಸ್ಥಿತಿಯಿಂದಾಗಿ ಮುಂಬೈ ಷೇರುಪೇಟೆ (ಬಿಎಸ್‌ಇ) ವಹಿವಾಟು ಮಧ್ಯಾಹ್ನದ ವಹಿವಾಟಿನಲ್ಲಿ ನಕಾರಾತ್ಮಕ ಹಾದಿ ಹಿಡಿದಿತ್ತು. ಬಳಿಕ ಚೇತರಿಕೆ ಕಂಡು 377 ಅಂಶ ಹೆಚ್ಚಾಗಿ, 33,605 ಅಂಶಗಳಲ್ಲಿ ದಿನದ ವಹಿವಾಟು ಅಂತ್ಯಗೊಂಡಿದೆ.

ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸೂಚ್ಯಂಕ ನಿಫ್ಟಿ 100 ಅಂಶ ಹೆಚ್ಚಾಗಿ 9,914 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ಗರಿಷ್ಠ ಗಳಿಕೆ: ದಿನದ ವಹಿವಾಟಿನಲ್ಲಿ ಎಚ್‌ಡಿಎಫ್‌ಸಿ ಬ್ಯಾಂಕ್‌ ಷೇರು ಶೇ 4ರಷ್ಟು ಗರಿಷ್ಠ ಏರಿಕೆ ಕಂಡಿತು. ಎಚ್‌ಡಿಎಫ್‌ಸಿ, ಐಸಿಐಸಿಐ ಬ್ಯಾಂಕ್‌, ಇನ್ಫೊಸಿಸ್, ಕೋಟಕ್‌ ಬ್ಯಾಂಕ್‌ ಮತ್ತು ಹೀರೊಮೊಟೊಕಾರ್ಪ್‌ ಷೇರುಗಳೂ ಏರಿಕೆ ಕಂಡಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.