ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಷೇರು ಖರೀದಿಗೆ ಹೂಡಿಕೆದಾರರ ಉತ್ಸಾಹ; ಸೆನ್ಸೆಕ್ಸ್‌ 500 ಅಂಶ ಹೆಚ್ಚಳ

Last Updated 28 ಏಪ್ರಿಲ್ 2021, 8:48 IST
ಅಕ್ಷರ ಗಾತ್ರ

ಮುಂಬೈ: ಬುಧವಾರ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ 516 ಅಂಶಗಳಷ್ಟು ಚೇತರಿಕೆ ಕಂಡಿದೆ. ಎಚ್‌ಡಿಎಫ್‌ಸಿ, ಬಜಾಜ್‌ ಫೈನಾನ್ಸ್‌ ಹಾಗೂ ಇನ್ಫೊಸಿಸ್‌ ಷೇರುಗಳ ಬೆಲೆ ಏರಿಕೆ ಕಂಡಿದೆ.

ಬೆಳಿಗ್ಗೆ 11:40ರ ವರೆಗೂ ಸೆನ್ಸೆಕ್ಸ್‌ 49,460 ಅಂಶ ತಲುಪಿದ್ದು, ನಿಫ್ಟಿ 137 ಅಂಶ ಹೆಚ್ಚಳದೊಂದಿಗೆ 14,790 ಅಂಶಗಳಲ್ಲಿ ವಹಿವಾಟು ನಡೆದಿದೆ.

ಬಜಾಜ್‌ ಫೈನಾನ್ಸ್‌ ಷೇರು ಶೇ 6.97ರಷ್ಟು ಹೆಚ್ಚಳ ಕಂಡಿದೆ. ಬಜಾಜ್‌ ಫಿನ್‌ಸರ್ವ್‌, ಬಜಾಜ್‌ ಆಟೊ, ಎಸ್‌ಬಿಐ, ಇಂಡಸ್‌ಇಂಡ್‌ ಬ್ಯಾಂಕ್‌, ಎಂಆ್ಯಂಡ್ಎಂ, ಭಾರ್ತಿ ಏರ್‌ಟೆಲ್‌, ಎಚ್‌ಡಿಎಫ್‌ಸಿ, ಇನ್ಫೊಸಿಸ್‌ ಹಾಗೂ ಕೊಟಾಕ್‌ ಬ್ಯಾಂಕ್‌ ಷೇರುಗಳ ಬೆಲೆ ಏರಿಕೆಯಾಗಿದೆ.

ಮಂಗಳವಾರ ಸೆನ್ಸೆಕ್ಸ್‌ 557.63 ಅಂಶ ಹೆಚ್ಚಳದೊಂದಿಗೆ 48,944.14, ನಿಫ್ಟಿ 168.05 ಅಂಶ ಏರಿಕೆಯಾಗಿ 14,653.05 ಅಂಶಗಳಲ್ಲಿ ವಹಿವಾಟು ಮುಕ್ತಾಯವಾಗಿತ್ತು. ವಿದೇಶಿ ಸಾಂಸ್ಥಿಕ ಹೂಡಿಕೆದಾರರು ₹ 1,454.75 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದರು ಹಾಗೂ ಪ್ರಾದೇಶೀಕ ಸಾಂಸ್ಥಿಕ ಹೂಡಿಕೆದಾರರು ₹ 1,463.44 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದರು.

ಬ್ಯಾಂಕ್‌ ಹಾಗೂ ಆಟೊ ವಲಯದ ಕಂಪನಿಗಳು ನಾಲ್ಕನೇ ತ್ರೈಮಾಸಿಕದಲ್ಲಿ ಉತ್ತಮ ಲಾಭಾಂಶ ದಾಖಲಿಸಿವೆ. ಹಾಗಾಗಿ ಹೂಡಿಕೆದಾರರು ಷೇರು ಖರೀದಿಗೆ ಉತ್ಸಾಹ ತೋರಿದ್ದಾರೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳದ ನಡುವೆಯೂ ದೇಶೀಯ ಸಾಂಸ್ಥಿಕ ಹೂಡಿಕೆದಾರರು ಷೇರುಗಳ ಖರೀದಿ ನಡೆಸಿದ್ದಾರೆ ಹಾಗೂ ವಿದೇಶಿ ಹೂಡಿಕೆದಾರರು ಏಪ್ರಿಲ್‌ನಲ್ಲಿ 10 ಸಾವಿರ ಕೋಟಿಗೂ ಅಧಿಕ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT